ವಿಜಯಪುರ:ಕನ್ನೋಳ್ಳಿ ಗ್ರಾಮದಲ್ಲಿ ಶ್ರೀ ಚೌಡೇಶ್ವರಿ ದೇವಿಯ ಮೂರ್ತಿ ಪ್ರತಿಷ್ಠಾಪನೆ
ವಿಜಯಪುರ, 19 ಆಗಸ್ಟ್ (ಹಿ.ಸ.) ಆ್ಯಂಕರ್ : ವಿಜಯಪುರ ಜಿಲ್ಲೆಯ ಸಿಂದಗಿ ವಿಧಾನಸಭಾ ಮತಕ್ಷೇತ್ರದ ವ್ಯಾಪ್ತಿಯ ಸುಕ್ಷೇತ್ರ ಕನ್ನೋಳ್ಳಿ ಗ್ರಾಮದಲ್ಲಿ ಶ್ರೀ ಚೌಡೇಶ್ವರಿ ದೇವಿಯ ಮೂರ್ತಿ ಪ್ರತಿಷ್ಠಾಪನಾ ಮಹೋತ್ಸವವು ಅತ್ಯಂತ ಸಡಗರ, ಸಂಭ್ರಮ ಹಾಗೂ ಭಕ್ತಿಭಾವದಿಂದ ಜರುಗಿತು. ಮಹೋತ್ಸವದ ಅಂಗವಾಗಿ ಹಮ್ಮಿಕೊಳ್ಳ
ಪೂಜೆ


ವಿಜಯಪುರ, 19 ಆಗಸ್ಟ್ (ಹಿ.ಸ.)

ಆ್ಯಂಕರ್ : ವಿಜಯಪುರ ಜಿಲ್ಲೆಯ ಸಿಂದಗಿ ವಿಧಾನಸಭಾ ಮತಕ್ಷೇತ್ರದ ವ್ಯಾಪ್ತಿಯ ಸುಕ್ಷೇತ್ರ ಕನ್ನೋಳ್ಳಿ ಗ್ರಾಮದಲ್ಲಿ ಶ್ರೀ ಚೌಡೇಶ್ವರಿ ದೇವಿಯ ಮೂರ್ತಿ ಪ್ರತಿಷ್ಠಾಪನಾ ಮಹೋತ್ಸವವು ಅತ್ಯಂತ ಸಡಗರ, ಸಂಭ್ರಮ ಹಾಗೂ ಭಕ್ತಿಭಾವದಿಂದ ಜರುಗಿತು.

ಮಹೋತ್ಸವದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಭವ್ಯ ಕುಂಭಮೇಳ ಹಾಗೂ ಡೊಳ್ಳು ಕುಣಿತದ ಮೆರವಣಿಗೆಯಲ್ಲಿ ಬಿಜೆಪಿ ಮುಖಂಡ ಶ್ರೀಶೈಲಗೌಡ ಬಿರಾದಾರ್ ಅವರು ಸಕಲ ಸದ್ಭಕ್ತರೊಂದಿಗೆ ಭಾಗವಹಿಸಿ, ತಾಯಿ ಚೌಡೇಶ್ವರಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ಕನ್ನೋಳ್ಳಿ ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಸಾಗಿದ ಭವ್ಯ ಮೆರವಣಿಗೆಯು ಭಕ್ತರ ಗಮನ ಸೆಳೆಯಿತು. ವಿವಿಧ ಕಲಾತಂಡಗಳ ಡೊಳ್ಳಿನ ಗಂಭೀರ ನಿನಾದ ಹಾಗೂ ಕಲಾವಿದರ ಉತ್ಸಾಹಭರಿತ ಡೊಳ್ಳು ಕುಣಿತ ಮೆರವಣಿಗೆಗೆ ಮತ್ತಷ್ಟು ಮೆರುಗು ತಂದಿತು. ಮುತ್ತೈದೆಯರು ಹೊತ್ತಿದ್ದ ಪೂರ್ಣಕುಂಭಗಳ ವೈಭವ, ಮಂಗಳವಾದ್ಯಗಳ ನಾದ ಹಾಗೂ ಭಕ್ತರ ಜಯಘೋಷಗಳಿಂದ ಇಡೀ ಕನ್ನೋಳ್ಳಿ ಗ್ರಾಮವೇ ದೈವೀ ವಾತಾವರಣದಲ್ಲಿ ಮಿಂದೆದ್ದಿತು.

ತಾಯಿ ಚೌಡೇಶ್ವರಿ ದೇವಿಯ ಮೇಲಿನ ಗ್ರಾಮಸ್ಥರು ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಭಕ್ತಾದಿಗಳ ಅಪಾರ ಶ್ರದ್ಧೆ, ಭಕ್ತಿ ಮತ್ತು ಉತ್ಸಾಹ ಈ ಸಂದರ್ಭದಲ್ಲಿ ವಿಶೇಷವಾಗಿ ಕಂಡುಬಂದಿತು. ಮಹಿಳೆಯರು, ಯುವಕರು, ಹಿರಿಯರು ಸೇರಿದಂತೆ ಅಪಾರ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡು ಮಹೋತ್ಸವದ ಸಂಭ್ರಮವನ್ನು ಹೆಚ್ಚಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶ್ರೀಶೈಲಗೌಡ ಬಿರಾದಾರ್ ಅವರು, “ತಾಯಿ ಚೌಡೇಶ್ವರಿ ದೇವಿಯ ಕೃಪೆ ಸಮಸ್ತ ಕನ್ನೋಳ್ಳಿ ಗ್ರಾಮದ ಜನತೆಯ ಮೇಲೆ ಸದಾ ಇರಲಿ ಎಂದರು.

ನಾಡಿಗೆ ಸುಭಿಕ್ಷೆ, ಶಾಂತಿ, ಸಮೃದ್ಧಿ ಹಾಗೂ ಸರ್ವರಿಗೂ ಉತ್ತಮ ಆರೋಗ್ಯ, ಐಶ್ವರ್ಯ ಮತ್ತು ನೆಮ್ಮದಿ ದೊರೆಯಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಹಾರೈಸಿದರು.

ಶ್ರೀ ಚೌಡೇಶ್ವರಿ ದೇವಿಯ ಮೂರ್ತಿ ಪ್ರತಿಷ್ಠಾಪನಾ ಮಹೋತ್ಸವವು ಗ್ರಾಮಸ್ಥರಲ್ಲಿ ಭಕ್ತಿ ಹಾಗೂ ಆಧ್ಯಾತ್ಮಿಕ ಭಾವನೆ ಮೂಡಿಸುವುದರ ಜೊತೆಗೆ, ಎಲ್ಲರನ್ನೂ ಒಗ್ಗೂಡಿಸುವ ಧಾರ್ಮಿಕ ಹಾಗೂ ಸಾಂಸ್ಕೃತಿಕ ಹಬ್ಬವಾಗಿ ಸಂಭ್ರಮದಿಂದ ನೆರವೇರಿತು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande