ಯಶಸ್ವಿ ಆಂಜಿಯೋಪ್ಲಾಸ್ಟಿ ಬಳಿಕ ಜೆ.ಪಿ. ನಡ್ಡಾ ಏಮ್ಸ್ನಿಂದ ಬಿಡುಗಡೆ
ನವದೆಹಲಿ, 19 ಆಗಸ್ಟ್ (ಹಿ.ಸ.): ಆ್ಯಂಕರ್: ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜೆ.ಪಿ. ನಡ್ಡಾ ಅವರನ್ನು ಯಶಸ್ವಿ ಆಂಜಿಯೋಪ್ಲಾಸ್ಟಿ ಬಳಿಕ ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್)ಯಿಂದ ಬುಧವಾರ ಬಿಡುಗಡೆ ಮಾಡಲಾಗಿದೆ. ಅವರ ಆರೋಗ್ಯ ಸ್ಥಿರವಾಗಿದ್ದು, ಮನೆಗೆ ತೆರಳಲು ವೈದ್
ಜೆ.ಪಿ.ನಡ್ಡಾ ಸಂಗ್ರಹ ಚಿತ್ರ


ನವದೆಹಲಿ, 19 ಆಗಸ್ಟ್ (ಹಿ.ಸ.):

ಆ್ಯಂಕರ್:

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜೆ.ಪಿ. ನಡ್ಡಾ ಅವರನ್ನು ಯಶಸ್ವಿ ಆಂಜಿಯೋಪ್ಲಾಸ್ಟಿ ಬಳಿಕ ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್)ಯಿಂದ ಬುಧವಾರ ಬಿಡುಗಡೆ ಮಾಡಲಾಗಿದೆ. ಅವರ ಆರೋಗ್ಯ ಸ್ಥಿರವಾಗಿದ್ದು, ಮನೆಗೆ ತೆರಳಲು ವೈದ್ಯರು ಅನುಮತಿ ನೀಡಿದ್ದಾರೆ.

ಎದೆನೋವು ಹಾಗೂ ಅಸ್ವಸ್ಥತೆಯ ಹಿನ್ನೆಲೆಯಲ್ಲಿ ಆಗಸ್ಟ್ 13ರಂದು ನಡ್ಡಾ ಅವರನ್ನು ಏಮ್ಸ್‌ಗೆ ದಾಖಲಿಸಲಾಗಿತ್ತು. ತಪಾಸಣೆ ವೇಳೆ ಕೊರೊನರಿ ಆಂಜಿಯೋಗ್ರಫಿ ನಡೆಸಲಾಗಿತ್ತು. ಬಳಿಕ ಆಗಸ್ಟ್ 17ರಂದು ಅವರಿಗೆ ಯಶಸ್ವಿಯಾಗಿ ಆಂಜಿಯೋಪ್ಲಾಸ್ಟಿ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು.

ಆಸ್ಪತ್ರೆಯಲ್ಲಿ ವೈದ್ಯಕೀಯ ನಿಗಾದಲ್ಲಿದ್ದ ನಡ್ಡಾ ಅವರ ಆರೋಗ್ಯ ಸ್ಥಿತಿ ಕ್ರಮೇಣ ಸುಧಾರಿಸಿದ ಹಿನ್ನೆಲೆಯಲ್ಲಿ ಬುಧವಾರ ಬಿಡುಗಡೆ ಮಾಡಲಾಗಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande