ಕುರುಗೋಡು: ಶುಚಿ ಮುಟ್ಟಿನ ಕಪ್ ವಿತರಣೆ ಹಾಗೂ ಜಾಗೃತಿ ಕಾರ್ಯಕ್ರಮ
ಕುರುಗೋಡು, 19 ಆಗಸ್ಟ್ (ಹಿ.ಸ.) ಆ್ಯಂಕರ್ : ಕೇಂದ್ರ ಮತ್ತು ರಾಜ್ಯ ಸರ್ಕಾರ, ರಾಷ್ಟಿಯ ಆರೋಗ್ಯ ಅಭಿಯಾನ, ಆರ್.ಬಿ.ಎಸ್.ಕೆ/ಆರ್.ಕೆ.ಎಸ್.ಕೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಬಳ್ಳಾರಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂಯುಕ
Kurugod: Distribution of sanitary menstrual cups and awareness


Kurugod: Distribution of sanitary menstrual cups and awareness


Kurugod: Distribution of sanitary menstrual cups and awareness


ಕುರುಗೋಡು, 19 ಆಗಸ್ಟ್ (ಹಿ.ಸ.)

ಆ್ಯಂಕರ್ : ಕೇಂದ್ರ ಮತ್ತು ರಾಜ್ಯ ಸರ್ಕಾರ, ರಾಷ್ಟಿಯ ಆರೋಗ್ಯ ಅಭಿಯಾನ, ಆರ್.ಬಿ.ಎಸ್.ಕೆ/ಆರ್.ಕೆ.ಎಸ್.ಕೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಬಳ್ಳಾರಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಶುಚಿ ಯೋಜನೆಯಡಿ ‘ಪ್ರೇರಣಾ ಮುಟ್ಟಿನ ಕಪ್’ ವಿತರಣೆ ಹಾಗೂ ಋತುಚಕ್ರದ ಆರೋಗ್ಯ ಮತ್ತು ನೈರ್ಮಲ್ಯ ಜಾಗೃತಿ ಕಾರ್ಯಕ್ರಮವನ್ನು ಕುರುಗೋಡಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿತ್ತು.

ಕುರುಗೋಡು ತಾಲೂಕು ಆರೋಗ್ಯ ಅಧಿಕಾರಿಗಳ ಕಾರ್ಯಾಲಯ, ಓರ್ವಾಯಿ ಪ್ರಾಥಮಿಕ ಆರೋಗ್ಯ ಕೇಂದ್ರ, ಕುರುಗೋಡು ಸಮುದಾಯ ಆರೋಗ್ಯ ಕೇಂದ್ರ ಹಾಗೂ ನಮ್ಮ ಕ್ಲಿನಿಕ್ ಸಹಯೋಗದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮಹಿಳೆಯರಲ್ಲಿ ಋತುಚಕ್ರದ ನೈರ್ಮಲ್ಯ ಹಾಗೂ ಮುಟ್ಟಿನ ಕಪ್ ಬಳಕೆಯ ಪ್ರಯೋಜನಗಳ ಕುರಿತು ಸಮಗ್ರ ಮಾಹಿತಿ ನೀಡಿ, ಜಾಗೃತಿ ಮೂಡಿಸಲಾಯಿತು.

ಮುಟ್ಟಿನ ಕಪ್ ಬಳಕೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಸಮುದಾಯ ಆರೋಗ್ಯ ಕೇಂದ್ರದ ಮಹಿಳಾ ಸಿಬ್ಬಂದಿ, ಕಚೇರಿ ಅಧಿಕಾರಿಗಳು, ಶುಶ್ರೂಷಣಾಧಿಕಾರಿಗಳು, ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿಗಳು ಹಾಗೂ ಆಶಾ ಕಾರ್ಯಕರ್ತೆಯರಿಗೆ ಒಟ್ಟು 98 ಮುಟ್ಟಿನ ಕಪ್ಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಕೆ.ಎಸ್.ಕೆ. ಸಂಯೋಜಕ ಕೆ.ಎನ್.ಎಂ. ಮನೋಹರ್, ದಂತ ವೈದ್ಯಾಧಿಕಾರಿ ಡಾ. ಗಾಯತ್ರಿ, ನೇತ್ರಾಧಿಕಾರಿ ಜಿ. ಪಲ್ಲವಿ, ಹಿರಿಯ ಶುಶ್ರೂಷಣಾಧಿಕಾರಿ ಕೆ.ಬಿ. ಸರಸ್ವತಿ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಕೆ. ಮಂಜುನಾಥ, ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಷಡಕ್ಷರಯ್ಯ ಮತ್ತು ಮಹೇಂದ್ರ ಕುಮಾರ್, ಪ್ರಭಾರಿ ಎಲ್.ಹೆಚ್.ವಿ. ಕೆ. ನೀಲಾವತಿ ಹಾಗೂ ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿಗಳಾದ ಡಿ. ಸುನೀತಾ, ರೇಣುಕಾ, ಗಿರಿಜಾ, ಜಯಶ್ರೀ ಸೇರಿದಂತೆ ಇತರ ಆರೋಗ್ಯ ಸಿಬ್ಬಂದಿ ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande