ಬಾಗಲಕೋಟೆ: ಸಾರ್ವಜನಿಕರ ಅನುಕೂಲಕ್ಕಾಗಿ ಪ್ರಜಾಸೌಧದಲ್ಲಿ ಲಿಫ್ಟ್ ವ್ಯವಸ್ಥೆ
ಬಾಗಲಕೋಟೆ, 19 ಆಗಸ್ಟ್ (ಹಿ.ಸ.) ಆ್ಯಂಕರ್ : ಹಿರಿಯ ನಾಗರಿಕರು ಹಾಗೂ ವಿಶೇಷ ಚೇತನರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದ ತಾಲೂಕು ಆಡಳಿತ ಸೌಧದ ಮೊದಲ ಮಹಡಿಗೆ ಲಿಫ್ಟ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಉಪನೋಂದಣಾಧಿಕಾರಿ ವೀರೇಶ್ ಕಟ್ಟಿಮನಿ ತಿಳಿಸಿದ್ದಾರೆ. ತಾಲೂಕು ಆ
ಲಿಫ್ಟ್


ಬಾಗಲಕೋಟೆ, 19 ಆಗಸ್ಟ್ (ಹಿ.ಸ.)

ಆ್ಯಂಕರ್ : ಹಿರಿಯ ನಾಗರಿಕರು ಹಾಗೂ ವಿಶೇಷ ಚೇತನರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದ ತಾಲೂಕು ಆಡಳಿತ ಸೌಧದ ಮೊದಲ ಮಹಡಿಗೆ ಲಿಫ್ಟ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಉಪನೋಂದಣಾಧಿಕಾರಿ ವೀರೇಶ್ ಕಟ್ಟಿಮನಿ ತಿಳಿಸಿದ್ದಾರೆ.

ತಾಲೂಕು ಆಡಳಿತ ಸೌಧದ ಮೊದಲ ಮಹಡಿಯಲ್ಲಿ ಉಪವಿಭಾಗಾಧಿಕಾರಿಗಳ ಕಚೇರಿ ಹಾಗೂ ಉಪನೊಂದಣಾಧಿಕಾರಿಗಳ ಕಚೇರಿಗಳು ಕಾರ್ಯನಿರ್ವಹಿಸುತ್ತಿವೆ. ವಿವಿಧ ಸರ್ಕಾರಿ ಕೆಲಸಗಳಿಗಾಗಿ ಪ್ರತಿನಿತ್ಯ ನೂರಾರು ಸಾರ್ವಜನಿಕರು ಈ ಕಚೇರಿಗಳಿಗೆ ಭೇಟಿ ನೀಡುತ್ತಾರೆ. ಆದರೆ ಮೊದಲ ಮಹಡಿಗೆ ತೆರಳಲು ಮೆಟ್ಟಿಲುಗಳನ್ನು ಬಳಸಬೇಕಾಗಿದ್ದರಿಂದ ಹಿರಿಯ ನಾಗರಿಕರು, ವಿಶೇಷ ಚೇತನರು ಹಾಗೂ ದೈಹಿಕವಾಗಿ ಮೆಟ್ಟಿಲು ಹತ್ತಲು ತೊಂದರೆ ಅನುಭವಿಸುವವರಿಗೆ ಸಾಕಷ್ಟು ಸಮಸ್ಯೆಯಾಗುತ್ತಿತ್ತು.

ಈ ಸಮಸ್ಯೆಯನ್ನು ಗಮನಿಸಿದ ಉಪವಿಭಾಗಾಧಿಕಾರಿಗಳು, ಸಾರ್ವಜನಿಕರಿಗೆ ಅದರಲ್ಲೂ ಹಿರಿಯ ನಾಗರಿಕರು ಮತ್ತು ವಿಶೇಷ ಚೇತನರಿಗೆ ಅನುಕೂಲವಾಗುವಂತೆ ಲಿಫ್ಟ್ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಂಡಿದ್ದಾರೆ. ಸಿಎಸ್ಆರ್ (ಕಾರ್ಪೊರೇಟ್ ಸೋಶಿಯಲ್ ರೆಸ್ಪಾನ್ಸಿಬಿಲಿಟಿ) ನಿಧಿಯಡಿ ಅಂದಾಜು ₹18 ಲಕ್ಷ ವೆಚ್ಚದಲ್ಲಿ ಲಿಫ್ಟ್ ನಿರ್ಮಾಣ ಮಾಡಲಾಗಿದೆ.

ಲಿಫ್ಟ್ ವ್ಯವಸ್ಥೆ ಉದ್ಘಾಟನೆಗೊಂಡಿದ್ದು, ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಲಾಗಿದೆ. ಇನ್ನು ಮುಂದೆ ನೋಂದಣಿ, ಕಂದಾಯ ಹಾಗೂ ಇತರೆ ಸರ್ಕಾರಿ ಕೆಲಸಗಳಿಗಾಗಿ ಮೊದಲ ಮಹಡಿಯಲ್ಲಿರುವ ಕಚೇರಿಗಳಿಗೆ ಆಗಮಿಸುವ ಸಾರ್ವಜನಿಕರು ಲಿಫ್ಟ್ ಸೌಲಭ್ಯವನ್ನು ಬಳಸಿಕೊಳ್ಳಬಹುದಾಗಿದೆ ಎಂದು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande