
ಬಳ್ಳಾರಿ, 19 ಆಗಸ್ಟ್ (ಹಿ.ಸ.)
ಆ್ಯಂಕರ್ : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಬಳ್ಳಾರಿ ಹಾಗೂ ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಜಿಲ್ಲಾ ವಕೀಲರ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಬಳ್ಳಾರಿ ಜಿಲ್ಲೆಯ ಪ್ಯಾರಾ ಲೀಗಲ್ ಸ್ವಯಂ ಸೇವಕರಿಗೆ ಆಗಸ್ಟ್ 20 ಮತ್ತು 21 ರಂದು ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಾಗಾರವನ್ನು ಆಗಸ್ಟ್ 20 ರಂದು ಬೆಳಿಗ್ಗೆ 9 ಗಂಟೆಗೆ ಬಳ್ಳಾರಿಯ ತಾಳೂರು ರಸ್ತೆಯಲ್ಲಿರುವ ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಮೊದಲನೇ ಮಹಡಿಯ ಸಭಾಂಗಣದಲ್ಲಿ ಜಿಲ್ಲಾ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಸಿದ್ದಲಿಂಗ ಪ್ರಭು ಅವರು ಉದ್ಘಾಟಿಸುವರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಹಾಗೂ ತರಬೇತುದಾರರಾದ ಹೆಚ್.ವೆಂಕಟೇಶ್ ಸೇರಿದಂತೆ ಪ್ರಮುಖರು ಉಪಸ್ಥಿತರಿರುವರು.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್