
ಕೊಪ್ಪಳ, 19 ಆಗಸ್ಟ್ (ಹಿ.ಸ.)
ಆ್ಯಂಕರ್ : ಗ್ರಾಮೀಣ ಯುವಕರನ್ನು ಸಮಾಜಮುಖಿ ಚಟುವಟಿಕೆಗಳು ಹಾಗೂ ಗ್ರಾಮಾಭಿವೃದ್ಧಿ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಉದ್ದೇಶದಿಂದ ಸರ್ಕಾರದ ಮಹತ್ವಾಕಾಂಕ್ಷಿ ಕಾರ್ಯಕ್ರಮವಾದ ಭಾರತ ಜೋಡೋ ಯುವ ಸಂಘ (ಬಿಜೆವೈಎಸ್) ರಚನೆ ಮತ್ತು ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಿದ್ದು, ಯುವಕ ಮತ್ತು ಯವತಿಯರು ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿಕೊಳ್ಳಬೇಕೆಂದು ಕೊಪ್ಪಳ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ದುಂಡಪ್ಪ ತುರಾದಿ ತಿಳಿಸಿದ್ದಾರೆ.
ಭಾರತ ಜೋಡೋ ಯುವ ಸಂಘದ ಉದ್ದೇಶಗಳಾದ ಕ್ರಿಡೇ, ಆರೋಗ್ಯ ಮತ್ತು ದೈಹಿಕ ಕ್ಷಮತೆಯನ್ನು ಉತ್ತೇಜಿಸುವದು, ಸಂವಿಧಾನ ಮೌಲ್ಯಗಳ ಬಗ್ಗೆ ಅರಿವು ಮೂಡಿಸುವದು, ಪರಿಸರ ಮತ್ತು ಪ್ರಕೃತಿಯ ಸಂರಕ್ಷಣೆ, ಸಾಮಾಜಿಕ ಸೌಹಾರ್ದತೆ ಮತ್ತು ಸಹಬಾಳ್ವೆಯನ್ನು ಬೆಳೆಸುವದು, ಸ್ಥಳೀಯ ಅಭಿವೃದ್ದಿಯಲ್ಲಿ ಯುವಕ ಮತ್ತು ಯುವತಿಯರನ್ನು ಸಕ್ರೀಯವಾಗಿ ತೊಡಗಿಸಿಕೊಳ್ಳುವದಾಗಿದೆ. 16 ರಿಂದ 35 ವರ್ಷದೊಳಗಿನ ಯುವಕ ಮತ್ತು ಯವತಿಯರು ತಮ್ಮ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಂಘಗಳನ್ನು ರಚಿಸಿ ಆನ್ಲೈನ್ ಮೂಲಕ https://bjys.karnataka.gov.in ನಲ್ಲಿ ಹಾಗು ಮೊಬೈಲ್ ಆಪ್ ಮೂಲಕ ನೋಂದಾಯಿಸಿಕೊಳ್ಳಲು ಕೋರಲಾಗಿದೆ.
ತಾಲೂಕಿನ ಪ್ರತಿಯೊಂದು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾರತ ಜೋಡೋ ಯುವ ಸಂಘಗಳನ್ನು ನೋಂದಾಯಿಸುವ ಗುರಿ ಹೊಂದಲಾಗಿದ್ದು, ಎಲ್ಲಾ ಅರ್ಹ ಯುವಕ ಮತ್ತು ಯವತಿಯರು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ತಮ್ಮ ಗ್ರಾಮದ ಅಭಿವೃದ್ಧಿಗೆ ಕೈಜೋಡಿಸುವಂತೆ ಕಾರ್ಯನಿರ್ವಾಹಕ ಅಧಿಕಾರಿಗಳು ಮನವಿ ಮಾಡಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ಗ್ರಾಮ ಪಂಚಾಯತ್ ಕಚೇರಿಗೆ ಭೇಟಿ ನೀಡುವಂತೆ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ದುಂಡಪ್ಪ ತುರಾದಿ ಮಾಹಿತಿ ನೀಡಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್