ಸೋನಿಯಾ ಗಾಂಧಿ ಕುರಿತು ಎಚ್.ಡಿ. ಕುಮಾರಸ್ವಾಮಿ ಹೇಳಿಕೆ ಖಂಡಿಸಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ
ಬೆಂಗಳೂರು, 19 ಆಗಸ್ಟ್ (ಹಿ.ಸ.): ಆ್ಯಂಕರ್: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಕುರಿತು ನೀಡಿರುವ ಹೇಳಿಕೆಯನ್ನು ಖಂಡಿಸಿ ಇಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎ
Sonia-Gandhi-Kumaraswamy


ಬೆಂಗಳೂರು, 19 ಆಗಸ್ಟ್ (ಹಿ.ಸ.):

ಆ್ಯಂಕರ್:

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಕುರಿತು ನೀಡಿರುವ ಹೇಳಿಕೆಯನ್ನು ಖಂಡಿಸಿ ಇಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್. ಮನೋಹರ್ ಅವರ ನೇತೃತ್ವದಲ್ಲಿ ಈ ಪ್ರತಿಭಟನೆ ಮತ್ತು ಅಪಾರ ಸಂಖ್ಯೆಯ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿ, ಕುಮಾರಸ್ವಾಮಿ ಅವರ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ರಾಜಕೀಯ ಭಿನ್ನಾಭಿಪ್ರಾಯಗಳನ್ನು ರಾಜಕೀಯವಾಗಿಯೇ ಎದುರಿಸಬೇಕು, ಒಬ್ಬ ಗೌರವಾನ್ವಿತ ಮಹಿಳೆಯ ವೈಯಕ್ತಿಕ ಹಿನ್ನೆಲೆ ಮತ್ತು ಮೂಲವನ್ನು ಪ್ರಶ್ನಿಸುವುದು ಅತ್ಯಂತ ಕೀಳುಮಟ್ಟದ ರಾಜಕೀಯ ಎಂದು ಎಸ್. ಮನೋಹರ್ ವಾಗ್ದಾಳಿ ನಡೆಸಿದರು.

ಸೋನಿಯಾ ಗಾಂಧಿ ಅವರು ದೇಶದ ಸಾರ್ವಜನಿಕ ಜೀವನದಲ್ಲಿ ಸೇವೆ ಸಲ್ಲಿಸಿರುವ ಹಿರಿಯ ನಾಯಕಿ ಎಂದು ಹೇಳಿದರು.

ಹಿಂದೆ ನರೇಂದ್ರ ಮೋದಿ ಹಾಗೂ ಬಿಜೆಪಿಯನ್ನು ತೀವ್ರವಾಗಿ ಟೀಕಿಸಿದ ಕುಮಾರಸ್ವಾಮಿ ಅವರು ಇಂದು ಅದೇ ಬಿಜೆಪಿ ಜೊತೆ ಕೈಜೋಡಿಸಿದ್ದಾರೆ , ತಮ್ಮ ರಾಜಕೀಯ ನಿಲುವುಗಳ ಬದಲಾವಣೆಗೆ ಮೊದಲು ಜನರಿಗೆ ಸ್ಪಷ್ಟನೆ ನೀಡುವಂತೆ ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಎ.ಆನಂದ್, ಪ್ರಕಾಶ್, ಆದಿತ್ಯ, ರಾಮಕೃಷ್ಣ, ಹೇಮರಾಜ್, ಮುರಳಿ, ಪುಟ್ಟರಾಜು, ಕುಶಾಲ್ ಅರುವೇಗೌಡ, ಲಕ್ಷ್ಮಿ ನಾರಾಯಣ್, ಉಮೇಶ್, ರಂಜಿತ್, ಪ್ರವೀಣ್ ರಾವ್, ಕಿಶೋರ್, ಓಬಲೇಸ್, ನವೀನ್ ಸಾಯಿ, ಪವನ್ ಸೇರಿದಂತೆ ಹಲವು ಪ್ರಮುಖರು ಭಾಗವಹಿಸಿದ್ದರು.

--

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande