ಬಿ.ಸಿ. ನಾಗೇಶ್ ಪ್ರಾಮಾಣಿಕ ವ್ಯಕ್ತಿ: ಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು, 19 ಆಗಸ್ಟ್ (ಹಿ.ಸ.): ಆ್ಯಂಕರ್: ಮಾಜಿ ಶಾಸಕ ಹಾಗೂ ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರ ನಿಧನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಮುಖ್ಯಮಂತ್ರಿಗಳು, ಸರಳತೆಯಿಂದ ನಾಗೇಶ್ ಅವರು ಎಲ್ಲರ ಆಪ್ತ ಹಾಗೂ ನೇರ ನಡೆ-ನ
ಮಾಜಿ ಸಚಿವ ಬಿ.ಸಿ. ನಾಗೇಶ್ ನಿಧನ


ಬೆಂಗಳೂರು, 19 ಆಗಸ್ಟ್ (ಹಿ.ಸ.):

ಆ್ಯಂಕರ್:

ಮಾಜಿ ಶಾಸಕ ಹಾಗೂ ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರ ನಿಧನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಮುಖ್ಯಮಂತ್ರಿಗಳು, ಸರಳತೆಯಿಂದ ನಾಗೇಶ್ ಅವರು ಎಲ್ಲರ ಆಪ್ತ ಹಾಗೂ ನೇರ ನಡೆ-ನುಡಿಗೆ ಹೆಸರಾಗಿದ್ದರು. ಜೀವನದಲ್ಲಿ ಅವರದೇ ಆದ ಚಾಪು ಮೂಡಿಸಿದ್ದ ಅವರು, ಜನರೊಂದಿಗೆ ಆತ್ಮೀಯವಾಗಿ ಬೆರೆತು ಶಾಸಕರಾಗಿ ಹಾಗೂ ಶಿಕ್ಷಣ ಸಚಿವರಾಗಿ ಅವರು ಸಲ್ಲಿಸಿದ ಸೇವೆ ಎಂದಿಗೂ ಸ್ಮರಣೀಯ ಎಂದಿದ್ದಾರೆ.

ಶಿಕ್ಷಣ ಕ್ಷೇತ್ರದ ಸುಧಾರಣೆ ಮತ್ತು ವಿದ್ಯಾರ್ಥಿಗಳ ಹಿತದ ಬಗ್ಗೆ ಬಿ.ಸಿ. ನಾಗೇಶ್ ಅವರು ವಿಶೇಷ ಕಾಳಜಿ ಹೊಂದಿದ್ದರು. ಶಿಕ್ಷಣ ಕ್ಷೇತ್ರದಲ್ಲಿ ಶಿಸ್ತು ತರುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಿದ್ದರು ಎಂದು ತಿಳಿಸಿರುವ ಸಿಎಂ ಡಿ.ಕೆ. ಶಿವಕುಮಾರ್, ರಾಜಕೀಯ ಭಿನ್ನಾಭಿಪ್ರಾಯಗಳ ನಡುವೆಯೂ ಅವರೊಂದಿಗೆ ಸೌಹಾರ್ದಯುತ ಸಂಬಂಧ ಕಾಪಾಡಿಕೊಂಡಿದ್ದನ್ನು ಸ್ಮರಿಸಿಕೊಂಡಿದ್ದಾರೆ.

ನಾಗೇಶ್ ಅವರು ಬಹಳ ವರ್ಷಗಳಿಂದ ನನಗೆ ಪರಿಚಯವಿದ್ದರು. ಮಂತ್ರಿಯಾಗಿ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದಾರೆ. ನೊಣವಿನಕೆರೆ ಮಠದ ಎಲ್ಲಾ ಕೆಲಸಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು. ಅವರ ಕ್ಷೇತ್ರದಲ್ಲಿ ಅವರ ಸಮುದಾಯದ ಮತದಾರರು ಹೆಚ್ಚಿಲ್ಲದಿದ್ದರೂ ಸತತವಾಗಿ ಗೆಲುವು ಸಾಧಿಸಿದ್ದರು. ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಭಗವಂತನು ಅವರ ಕುಟುಂಬಕ್ಕೆ ಹಾಗೂ ಅಭಿಮಾನಿಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ. ಜೊತೆಗೆ, ಅವರ ಅಂತಿಮ ವಿಧಿಗಳಿಗೆ ಸರ್ಕಾರದಿಂದ ಗೌರವ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.

----------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande