
ಬೆಂಗಳೂರು, 19 ಆಗಸ್ಟ್ (ಹಿ.ಸ.):
ಆ್ಯಂಕರ್:
ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.
ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಬುಧವಾರ ಪ್ರತಿಕ್ರಿಯೆ ನೀಡಿದ ಅವರು, ಕಳ್ಳಬೇಟೆ ನಿಗ್ರಹ ಶಿಬಿರಗಳನ್ನು ಜಿಲೆಟಿನ್ ಬಳಸಿ ಸ್ಪೋಟಿಸಲಾಗಿದ್ದು, ತಮಿಳುನಾಡು ಮೂಲದ ಕಳ್ಳರ ಕೈವಾಡದ ಶಂಕೆಯಿದೆಯೇ ಎಂದು ಕೇಳಿದಾಗ, ನನಗೂ ಕೆಲವು ಮಾಹಿತಿ ಬರುತ್ತಿದೆ. ಅರಣ್ಯ ಸಚಿವರು ತನಿಖೆ ಮಾಡಿಸುತ್ತಿದ್ದಾರೆ. ಈಗ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ವರದಿ ಬಂದ ಬಳಿಕ ಮಾಹಿತಿ ನೀಡುತ್ತೇವೆ ಎಂದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.