
ಬೆಂಗಳೂರು, 19 ಆಗಸ್ಟ್ (ಹಿ.ಸ.):
ಆ್ಯಂಕರ್:
ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ವಿಧಾನ ಪರಿಷತ್ನಲ್ಲಿ ಬುಧವಾರವೂ ಬಿಜೆಪಿ ಸದಸ್ಯರು ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ.
ಕಪ್ಪು ಶಾಲು ಧರಿಸಿ ಸದನದ ಒಳಗೆ ಆಗಮಿಸಿದ ಪ್ರತಿ ಪಕ್ಷದ ಸದಸ್ಯರು ಸರ್ಕಾರದ ವಿರುದ್ಧ ತೀವ್ರ ಘೋಷಣೆಗಳನ್ನು ಕೂಗಿ ಗದ್ದಲ ಸೃಷ್ಟಿಸಿದರು.
ಪ್ರಶ್ನೋತ್ತರ ಕಲಾಪದ ವೇಳೆ ಬಿಜೆಪಿ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ನಾಗೇಂದ್ರ ಅವರ ರಾಜೀನಾಮೆಯನ್ನು ಪ್ರಸ್ತಾಪಿಸಿದರು ಬಿಗುವಿನ ವಾತಾವರಣ ನಿರ್ಮಾಣವಾಯಿತು. ವಿಷಯ ಪ್ರಸ್ತಾಪಕ್ಕೆ ಆಡಳಿತ ಪಕ್ಷದಿಂದ ವಿರೋಧ ವ್ಯಕ್ತಪಡಿಸಿದರು, ಗದ್ದಲದ ಮಧ್ಯೆ ಸಭಾಪತಿಗಳು ಪ್ರಶ್ನೋತ್ತರ ಕಲಾಪಕ್ಕೆ ಅನುಮತಿ ನೀಡಿದರು.
ಸರ್ಕಾರದ ನಿಲುವಿಗೆ ಅತೃಪ್ತಿ ವ್ಯಕ್ತಪಡಿಸಿರುವ ಬಿಜೆಪಿ ನಾಯಕರು ಶುಕ್ರವಾರದವರೆಗೂ ತಮ್ಮ ಹೋರಾಟವನ್ನು ಮುಂದುವರಿಸಲು ತೀರ್ಮಾನಿಸಿದ್ದಾರೆ. ಸೋಮವಾರದ ವೇಳೆಗೆ ಸಚಿವರು ತಮ್ಮ ರಾಜೀನಾಮೆ ನೀಡದಿದ್ದರೆ, ಮುಂದಿನ ದಿನಗಳಲ್ಲಿ ಹೋರಾಟವನ್ನು ತೀವ್ರಗೊಳಿಸುವುದಾಗಿ ಬಿಜೆಪಿ ಸದಸ್ಯರು ಎಚ್ಚರಿಕೆ ನೀಡಿದ್ದಾರೆ.
--
ಹಿಂದೂಸ್ತಾನ್ ಸಮಾಚಾರ್ / BHARGAVI G R