
ಬೆಂಗಳೂರು, 19 ಆಗಸ್ಟ್ (ಹಿ.ಸ.):
ಆ್ಯಂಕರ್:
ನಾಡಿನಾದ್ಯಂತ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಹಬ್ಬದ ಸಿದ್ಧತೆಗಾಗಿ ರಾಜಧಾನಿ ಬೆಂಗಳೂರಿನ ಪ್ರಮುಖ ಮಾರುಕಟ್ಟೆಯಾದ ಕೆ.ಆರ್. ಮಾರುಕಟ್ಟೆಗೆ ಜನರು ಮುಗಿಬಿದ್ದಿದ್ದಾರೆ.
ಹಬ್ಬದ ಪೂಜೆಗೆ ಅಗತ್ಯವಾದ ಹೂವು, ಹಣ್ಣು ಹಾಗೂ ಪೂಜಾ ಸಾಮಗ್ರಿಗಳನ್ನು ಖರೀದಿಸಲು ಮುಂಜಾನೆಯಿಂದಲೇ ಜನರು ಮಾರುಕಟ್ಟೆಗೆ ಆಗಮಿಸಿದ್ದರಿಂದ ಭಾರಿ ಜನಸಂದಣಿ ಕಂಡುಬಂತು. ಕಾಲಿಡಲೂ ಜಾಗವಿಲ್ಲದಷ್ಟು ನೂಕುನುಗ್ಗಲು ಉಂಟಾಗಿದ್ದು, ಗ್ರಾಹಕರು ಖರೀದಿಗೆ ಪರದಾಡುವಂತಾಯಿತು.
ಜನದಟ್ಟಣೆಯ ನಡುವೆಯೇ ವಾಹನಗಳ ಸಂಚಾರಕ್ಕೂ ತೀವ್ರ ತೊಂದರೆ ಉಂಟಾಯಿತು. ಮಾರುಕಟ್ಟೆ ಸುತ್ತಮುತ್ತ ಸಂಚಾರ ದಟ್ಟಣೆ ಹೆಚ್ಚಾಗಿ ವಾಹನ ಸವಾರರು ಪರದಾಡಿದರು.
ಹಬ್ಬದ ಹಿನ್ನೆಲೆಯಲ್ಲಿ ಹೂವುಗಳಿಗೆ ಬೇಡಿಕೆ ಹೆಚ್ಚಾದ ಪರಿಣಾಮ ವಿವಿಧ ಬಗೆಯ ಹೂವುಗಳ ಬೆಲೆ ಏರಿಕೆಯಾಗಿದೆ. ದರ ಹೆಚ್ಚಳದ ನಡುವೆಯೂ ದೇವಿಗೆ ಪ್ರಿಯವಾದ ಹೂವುಗಳನ್ನು ಖರೀದಿಸಲು ಜನರ ಉತ್ಸಾಹ ಕಡಿಮೆಯಾಗಿಲ್ಲ. ಹೂವು ಹಾಗೂ ಹಣ್ಣುಗಳ ಖರೀದಿಗಾಗಿ ಜನರು ಉದ್ದನೆಯ ಸಾಲಿನಲ್ಲಿ ನಿಂತು ಕಾಯುತ್ತಿರುವ ದೃಶ್ಯ ಕಂಡುಬಂತು.
----------------
ಹಿಂದೂಸ್ತಾನ್ ಸಮಾಚಾರ್ / BHARGAVI G R