
ಕಂಪ್ಲಿ, 20 ಆಗಸ್ಟ್ (ಹಿ.ಸ.)
ಆ್ಯಂಕರ್ : ಕಂಪ್ಲಿ ತಾಲ್ಲೂಕಿನ ಎಮ್ಮಿಗನೂರು ಗ್ರಾಮದ ಮಾರೆಪ್ಪ ಎನ್ನುವ 70 ವರ್ಷದ ವೃದ್ಧ 2026ರ ಜನವರಿ 01 ರಂದು ಕಾಣೆಯಾಗಿರುವ ಕುರಿತು ಕುರುಗೊಡು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಠಾಣಾಧಿಕಾರಿ ಅವರು ಮನವಿ ಮಾಡಿದ್ದಾರೆ.
ವೃದ್ಧನ ಚಹರೆ:
ಎತ್ತರ 5.0 ಅಡಿ, ಕೋಲು ಮುಖ, ಕಪ್ಪು ಮೈಬಣ್ಣ, ತೆಳ್ಳನೆಯ ಮೈಕಟ್ಟು ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾನೆ. ಕಾಣೆಯಾದ ಸಂದರ್ಭದಲ್ಲಿ ಬಿಳಿ ಬಣ್ಣದ ತುಂಬು ತೋಳಿನ ಅಂಗಿ ಹಾಗೂ ಬಿಳಿ ಬಣ್ಣದ ಲುಂಗಿ ಧರಿಸಿರುತ್ತಾನೆ.
ಈ ಮೇಲ್ಕಂಡ ಚಹರೆ ಗುರುತುಗಳುಳ್ಳ ವೃದ್ಧನ ಬಗ್ಗೆ ಮಾಹಿತಿ ದೊರೆತಲ್ಲಿ ಕುರುಗೋಡು ಪೊಲೀಸ್ ಠಾಣೆಯ ದೂ.0839-2263433, ಮೊ.9480803039, 9480803051 ಅಥವಾ ಬಳ್ಳಾರಿ ಕಂಟ್ರೋಲ್ ರೂಂ ದೂ.083922-58100 ಗೆ ಸಂಪರ್ಕಿಸಬಹುದು.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್