
ಬಳ್ಳಾರಿ, 20 ಆಗಸ್ಟ್ (ಹಿ.ಸ.)
ಆ್ಯಂಕರ್ : ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸರ್ಕಾರಿ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿಗಳ ವಾಸಕ್ಕೆ ಬಾಡಿಗೆ ಕಟ್ಟಡ ಬೇಕಾಗಿದ್ದು, ಆಸಕ್ತ ಮಾಲೀಕರು ಸಂಪರ್ಕಿಸಬಹುದಾಗಿದೆ.
2026-27 ನೇ ಸಾಲಿನ ಬಾಲಕಿಯರ ವಸತಿ ನಿಲಯದಲ್ಲಿ ಮಂಜೂರಾತಿ ಸಂಖ್ಯೆಗಿ0ತ ಹೆಚ್ಚಿನ ವಿದ್ಯಾರ್ಥಿಗಳು ಪ್ರವೇಶ ಪಡೆದಿರುವುದರಿಂದ ನಿಲಯವನ್ನು ವಿಭಜಿಸಿ ನೂರು ಸಂಖ್ಯಾ ಬಲದ ಮತ್ತೊಂದು ವಿದ್ಯಾರ್ಥಿ ನಿಲಯ ಆರಂಭಿಸಲು ತೀರ್ಮಾನಿಸಲಾಗಿದ್ದು, ವಿದ್ಯಾರ್ಥಿಗಳ ವಾಸಕ್ಕೆ ಅನುಕೂಲಕರವಾಗಿರುವ ಬಾಡಿಗೆ ಕಟ್ಟಡದ ಅವಶ್ಯವಿದ್ದು, ಕಟ್ಟಡ ಒದಗಿಸಲು ಆಸಕ್ತ ಹೊಂದಿರುವ ಮಾಲೀಕರು ಕಟ್ಟಡದ ಸೂಕ್ತ ದಾಖಲಾತಿಗಳೊಂದಿಗೆ ನಗರದ ವಾಲ್ಮೀಕಿ ಭವನದ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ ಆಗಸ್ಟ್ 31 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿ ವಾಲ್ಮೀಕಿ ಭವನದ ತಾಲೂಕು ಕಲ್ಯಾಣಾಧಿಕಾರಿಗಳ ಕಚೇರಿ ಅಥವಾ ಮೊ.9110224569 ಗೆ ಕರೆ ಮಾಡಿ ಸಂಪರ್ಕಿಸಬಹುದು ಎಂದು ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್