ಡಿ.ದೇವರಾಜ ಅರಸು ಆಶಯ ಮೈಗೂಡಿಸಿಕೊಳ್ಳಿ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜ ಕರೆ
ಬಳ್ಳಾರಿ, 20 ಆಗಸ್ಟ್ (ಹಿ.ಸ.) ಆ್ಯಂಕರ್ : ಸಂವಿಧಾನದ ಪೀಠಿಕೆಯಲ್ಲಿ ಪ್ರತಿಪಾದಿಸಿರುವ ಸಾಮಾಜಿಕ ನ್ಯಾಯದ ಆಶಯವನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಳ್ಳಬೇಕು ಎಂದು ಡಾ.ಬಾಬು ಜಗಜೀವನ್ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ
ಡಿ.ದೇವರಾಜ ಅರಸು ಅವರ ಸಾಮಾಜಿಕ ನ್ಯಾಯದ ಆಶಯ ಮೈಗೂಡಿಸಿಕೊಳ್ಳಿ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜ


ಡಿ.ದೇವರಾಜ ಅರಸು ಅವರ ಸಾಮಾಜಿಕ ನ್ಯಾಯದ ಆಶಯ ಮೈಗೂಡಿಸಿಕೊಳ್ಳಿ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜ


ಡಿ.ದೇವರಾಜ ಅರಸು ಅವರ ಸಾಮಾಜಿಕ ನ್ಯಾಯದ ಆಶಯ ಮೈಗೂಡಿಸಿಕೊಳ್ಳಿ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜ


ಡಿ.ದೇವರಾಜ ಅರಸು ಅವರ ಸಾಮಾಜಿಕ ನ್ಯಾಯದ ಆಶಯ ಮೈಗೂಡಿಸಿಕೊಳ್ಳಿ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜ


ಡಿ.ದೇವರಾಜ ಅರಸು ಅವರ ಸಾಮಾಜಿಕ ನ್ಯಾಯದ ಆಶಯ ಮೈಗೂಡಿಸಿಕೊಳ್ಳಿ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜ


ಡಿ.ದೇವರಾಜ ಅರಸು ಅವರ ಸಾಮಾಜಿಕ ನ್ಯಾಯದ ಆಶಯ ಮೈಗೂಡಿಸಿಕೊಳ್ಳಿ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜ


ಬಳ್ಳಾರಿ, 20 ಆಗಸ್ಟ್ (ಹಿ.ಸ.)

ಆ್ಯಂಕರ್ : ಸಂವಿಧಾನದ ಪೀಠಿಕೆಯಲ್ಲಿ ಪ್ರತಿಪಾದಿಸಿರುವ ಸಾಮಾಜಿಕ ನ್ಯಾಯದ ಆಶಯವನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಳ್ಳಬೇಕು ಎಂದು ಡಾ.ಬಾಬು ಜಗಜೀವನ್ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ ಅವರು ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಗುರುವಾರ ಏರ್ಪಡಿಸಿದ್ದ ಸಾಮಾಜಿಕ ನ್ಯಾಯದ ಹರಿಕಾರ, ಹಿಂದುಳಿದ ವರ್ಗಗಳ ನೇತಾರ ಹಾಗೂ ಮಾಜಿ ಮುಖ್ಯಮಂತ್ರಿ ದಿವಂಗತ ಡಿ.ದೇವರಾಜ ಅರಸು ಅವರ 111ನೇ ಜನ್ಮದಿನಾಚರಣೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ವಿನೋಬಾ ಭಾವೆಯವರ ಭೂದಾನ ಚಳವಳಿಯ ಪ್ರೇರಣೆಯೊಂದಿಗೆ ರಾಜ್ಯದಲ್ಲಿ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರು ‘ಉಳುವವನೇ ಒಡೆಯ’ ಎಂಬ ಐತಿಹಾಸಿಕ ಭೂಸುಧಾರಣಾ ಕಾಯ್ದೆಯನ್ನು ಜಾರಿಗೆ ತಂದರು. ಬಡವರು, ದಲಿತರು ಹಾಗೂ ಹಿಂದುಳಿದ ವರ್ಗಗಳಿಗೆ ಭೂಮಿಯ ಹಕ್ಕು ನೀಡಿ, ಬಡತನ ನಿರ್ಮೂಲನೆಗೆ ಮತ್ತು ಸಾಮಾಜಿಕ ಸಮಾನತೆಗೆ ಅಡಿಪಾಯ ಹಾಕಿದ ಮಹಾನ್ ನಾಯಕ ಅರಸು ಎಂದು ಸ್ಮರಿಸಿದರು.

ಯುವಜನರು ಮತ್ತು ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯರ್ಥವಾಗಿ ಸಮಯ ಕಳೆಯುವುದನ್ನು ನಿಲ್ಲಿಸಬೇಕು. ಮೊಬೈಲ್ ವ್ಯಾಮೋಹದಿಂದ ಹೊರಬಂದು ಪುಸ್ತಕ ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು. ಡಾ. ಬಿ.ಆರ್. ಅಂಬೇಡ್ಕರ್ ಅವರಂತಹ ನಾಯಕರ ಅಧ್ಯಯನ ಶೀಲತೆಯನ್ನು ಮಾದರಿಯಾಗಿಟ್ಟುಕೊಂಡು, ಜ್ಞಾನವರ್ಧಕ ಕೃತಿಗಳನ್ನು ಓದುವತ್ತ ಗಮನಹರಿಸಬೇಕು ಎಂದು ಸಲಹೆ ನೀಡಿದರು.

ಜಾತಿ, ಧರ್ಮ, ಭಾಷೆ ಮತ್ತು ಪ್ರಾದೇಶಿಕ ಭೇದಭಾವಗಳನ್ನು ಮರೆತು ದೇಶದ ಏಕತೆ, ಸಮಗ್ರತೆ ಮತ್ತು ಶಾಂತಿಯನ್ನು ಕಾಪಾಡುವ ಸಂವಿಧಾನದ ಸಂದೇಶವನ್ನು ಎಲ್ಲರೂ ಪಾಲಿಸಬೇಕೆಂದು ಸದ್ಭಾವನಾ ಪ್ರತಿಜ್ಞೆಯ ಮೂಲಕ ಕರೆ ನೀಡಿದರು.

ಮಹಾನಗರ ಪಾಲಿಕೆಯ ಮಹಾಪೌರರಾದ ಪಿ.ಗಾದೆಪ್ಪ ಅವರು ಮಾತನಾಡಿ, ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಸಾಮಾಜಿಕ ನ್ಯಾಯದ ಹರಿಕಾರ ಡಿ. ದೇವರಾಜ ಅರಸು ಅವರ ದೂರದೃಷ್ಟಿ ಹಾಗೂ ಕೊಡುಗೆಗಳು ಇಂದಿಗೂ ಲಕ್ಷಾಂತರ ಜನರ ಬದುಕಿಗೆ ದಾರಿದೀಪವಾಗಿವೆ ಎಂದು ಹೇಳಿದರು.

ದೇವರಾಜ ಅರಸು ಅವರು ಅಂದಿನ ಕಾಲದಲ್ಲೇ ಸಮಾಜದ ವಿರೋಧವನ್ನು ಎದುರಿಸಿ, ಹಿಂದುಳಿದ ವರ್ಗಗಳ ಪರವಾಗಿ ದಿಟ್ಟ ಕಾಯ್ದೆಗಳನ್ನು ಜಾರಿಗೆ ತಂದರು. ಅವರ ಪರಿಕಲ್ಪನೆಯ ವಸತಿ ನಿಲಯಗಳು ಮತ್ತು ರಾಜಕೀಯ ಮೀಸಲಾತಿಯ ಫಲವಾಗಿಯೇ ಇಂದು ತಳಸಮುದಾಯಗಳ ಲಕ್ಷಾಂತರ ಜನರು ಜನಪ್ರತಿನಿಧಿಗಳಾಗಿ, ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಳ್ಳಲು ಸಾಧ್ಯವಾಗಿದೆ ಎಂದರು.

ಭಾರತಕ್ಕೆ ಆಧುನಿಕ ತಂತ್ರಜ್ಞಾನ ಮತ್ತು ಕಂಪ್ಯೂಟರ್ ಯುಗವನ್ನು ಪರಿಚಯಿಸಿದ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಚಿಂತನೆಗಳನ್ನು ಸ್ಮರಿಸಿ, ಯುವ ಸಮುದಾಯ ಅವರಂತೆ ಉನ್ನತ ಗುರಿಗಳನ್ನು ಹೊಂದಿರಬೇಕು ಎಂದು ಕರೆ ನೀಡಿದರು.

ಮುಂದೆ ಗುರಿ, ಹಿಂದೆ ಗುರು ಇರಬೇಕು ಎಂಬ ಹಿರಿಯರ ಮಾತಿನಂತೆ, ಯುವಕರು ಜೀವನದಲ್ಲಿ ಸ್ಪಷ್ಟ ಗುರಿಯಿಟ್ಟುಕೊಂಡು ಮುನ್ನಡೆದರೆ ಯಶಸ್ಸು ಖಂಡಿತ ಸಾಧ್ಯ. ಹಿರಿಯರು ಹಾಕಿಕೊಟ್ಟ ಸಾಮಾಜಿಕ ನ್ಯಾಯದ ಹಾದಿಯಲ್ಲಿ ನಾವೆಲ್ಲರೂ ಸಾಗಬೇಕಿದೆ ಎಂದು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್ ಅವರು ಮಾತನಾಡಿ, ಕರ್ನಾಟಕದಲ್ಲಿ ಸಾಮಾಜಿಕ ಅಸಮಾನತೆಯನ್ನು ಹೋಗಲಾಡಿಸಲು ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರು ಜಾರಿಗೆ ತಂದ ‘ಉಳುವವನೇ ಹೊಲದೊಡೆಯ' (ಭೂಸುಧಾರಣಾ ಕಾಯ್ದೆ) ಕ್ರಾಂತಿಕಾರಿ ಹೆಜ್ಜೆಯನ್ನು ಅವರು ಸ್ಮರಿಸಿದರು. ಶೋಷಿತರಿಗೆ ಭೂಮಿಯ ಒಡೆತನ ನೀಡಿ ಸಾಮಾಜಿಕ ನ್ಯಾಯ ದೊರಕಿಸಿಕೊಟ್ಟ ಅರಸು ಅವರ ಆಡಳಿತ ಇಂದಿಗೂ ಮಾದರಿಯಾಗಿದೆ ಎಂದರು.

ಡಾ. ಬಿ.ಆರ್. ಅಂಬೇಡ್ಕರ್ ಅವರು ನಮಗೆ ನೀಡಿರುವ ಸಂವಿಧಾನವೇ ನಮ್ಮ ಅತ್ಯುನ್ನತ ಶಕ್ತಿ. ಶ್ರಮಜೀವಿಗಳಾಗಿ ಶ್ರಮಪಟ್ಟರೆ ಸಂವಿಧಾನ ನೀಡಿರುವ ಉನ್ನತ ಹುದ್ದೆಗಳನ್ನು ಪ್ರತಿಯೊಬ್ಬರೂ ಅಲಂಕರಿಸಲು ಸಾಧ್ಯ. ವಿದ್ಯಾರ್ಥಿಗಳು ಕೇವಲ ಅದೃಷ್ಟವನ್ನು ನಂಬದೆ ಕಠಿಣ ಪರಿಶ್ರಮ, ನಿರಂತರ ಅಧ್ಯಯನ ನಡೆಸಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಸತ್ಯಂ ಶಿಕ್ಷಣ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಆಲಂಭಾಷ ಅವರು ದಿವಂಗತ ಡಿ.ದೇವರಾಜು ಅರಸು ಅವರ ಕುರಿತು ವಿಶೇಷ ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧೀನದಲ್ಲಿ ಬರುವ ವಿದ್ಯಾರ್ಥಿ ನಿಲಯಗಳಲ್ಲಿ ಅತಿ ಹೆಚ್ಚು ಅಂಕ ಪಡೆದ ಹಾಗೂ ವಿವಿಧ ಚಟುವಟಿಕೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಸನ್ಮಾನ, ಪ್ರಶಸ್ತಿ ವಿತರಣೆ ಮಾಡಲಾಯಿತು.

ಇದಕ್ಕೂ ಮುನ್ನ ಸಂವಿಧಾನ ಪ್ರಸ್ತಾವನೆಯನ್ನು ಬೋಧಿಸಲಾಯಿತು. ಇದೇ ವೇಳೆ ಭಾರತದ ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಅವರ ಜನ್ಮದಿನದ ಅಂಗವಾಗಿ ಸದ್ಭಾವನಾ ದಿನಾಚರಣೆ ಅಂಗವಾಗಿ ಪ್ರತಿಜ್ಞಾವಿಧಿ ಸ್ವೀಕರಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ, ಡಿ.ದೇವರಾಜ ಅರಸು ವೇದಿಕೆಯ ಜಿಲ್ಲಾಧ್ಯಕ್ಷ ಕಲ್ಲುಕಂಭ ಪಂಪಾಪತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಜಲಾಲಪ್ಪ ಎ.ಕೆ., ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳು, ಹಿಂದುಳಿದ ವರ್ಗಗಳ ವಿವಿಧ ಸಂಘ- ಸಂಸ್ಥೆಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ- ಸಿಬ್ಬಂದಿ ವರ್ಗ, ವಸತಿ ನಿಲಯಗಳ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande