. ದೇವರಾಜ ಅರಸು 111ನೇ ಜಯಂತಿ: ಜಾಥಾ
ಹಾಸನ, 20 ಆಗಸ್ಟ್ (ಹಿ.ಸ.): ಆ್ಯಂಕರ್: ಕರ್ನಾಟಕದ ಮಾಜಿ ಮುಖ್ಯಮಂತ್ರಿಯಾಗಿದ್ದ ಡಿ. ದೇವರಾಜ ಅರಸು ಅವರು ರಾಜ್ಯ ಹಾಗೂ ದೇಶದ ನಾಗರಿಕರಿಗೆ ಉತ್ತಮ ಕೀರ್ತಿ ತಂದುಕೊಟ್ಟಿದ್ದಾರೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭಂ ಶುಕ್ಲಾ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲ
ಜಾಥಾ


ಹಾಸನ, 20 ಆಗಸ್ಟ್ (ಹಿ.ಸ.):

ಆ್ಯಂಕರ್:

ಕರ್ನಾಟಕದ ಮಾಜಿ ಮುಖ್ಯಮಂತ್ರಿಯಾಗಿದ್ದ ಡಿ. ದೇವರಾಜ ಅರಸು ಅವರು ರಾಜ್ಯ ಹಾಗೂ ದೇಶದ ನಾಗರಿಕರಿಗೆ ಉತ್ತಮ ಕೀರ್ತಿ ತಂದುಕೊಟ್ಟಿದ್ದಾರೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭಂ ಶುಕ್ಲಾ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಡಿ. ದೇವರಾಜ ಅರಸು ಅವರ 111ನೇ ಜನ್ಮದಿನಾಚರಣೆ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಮಾತನಾಡಿದ ಅವರು, ಕ್ವಿಟ್ ಇಂಡಿಯಾ ಚಳವಳಿಯಲ್ಲಿ ಭಾಗವಹಿಸಿ ಸ್ವಾತಂತ್ರ್ಯ ಹೋರಾಟಗಾರರಾಗಿ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಅರಸು ಅವರ ಪಾತ್ರ ಮಹತ್ವದ್ದಾಗಿದೆ. ಭೂ ಸುಧಾರಣೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಕ್ಷೇತ್ರದಲ್ಲೂ ಅವರ ಕೊಡುಗೆ ಅಪಾರವಾಗಿದೆ ಎಂದು ತಿಳಿಸಿದರು.

ಉಪವಿಭಾಗಾಧಿಕಾರಿ ಜಗದೀಶ್ ಗಂಗಣ್ಣನವರ್ ಜಾಥಕ್ಕೆ ಚಾಲನೆ ನೀಡಿ ಮಾತನಾಡಿ, ಭಾರತಕ್ಕೆ ಸ್ವಾತಂತ್ರ್ಯ ದೊರೆತ ಬಳಿಕ ನಡೆದ ಮೊದಲ ಚುನಾವಣೆಯಲ್ಲಿ ಹುಣಸೂರು ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾದ ಡಿ. ದೇವರಾಜ ಅರಸು ಅವರು 10 ವರ್ಷ ಶಾಸಕರಾಗಿ ಸೇವೆ ಸಲ್ಲಿಸಿದರು. ಎರಡು ಬಾರಿ ಮುಖ್ಯಮಂತ್ರಿಯಾಗಿ, ಒಟ್ಟು 739 ದಿನಗಳ ಕಾಲ ರಾಜ್ಯದ ಮುಖ್ಯಮಂತ್ರಿಯಾಗಿ ವಿವಿಧ ಜನಪರ ಯೋಜನೆಗಳನ್ನು ಜಾರಿಗೆ ತಂದರು ಎಂದು ಹೇಳಿದರು.

ಸಾಮಾಜಿಕ ಸುಧಾರಣೆ ಹಾಗೂ ಬಡವರು ಮತ್ತು ಶ್ರೀಮಂತರ ನಡುವಿನ ಅಂತರವನ್ನು ಕಡಿಮೆ ಮಾಡುವ ಉದ್ದೇಶದಿಂದ ಭೂ ಸುಧಾರಣಾ ಕಾಯ್ದೆಯಡಿ ‘ಉಳುವವನೇ ಭೂಮಿಯ ಒಡೆಯ’ ಎಂಬ ಮಹತ್ವದ ಯೋಜನೆಯನ್ನು ಜಾರಿಗೆ ತಂದರು. ರಾಜ್ಯದಲ್ಲಿ ಬಡತನ ಹೆಚ್ಚಾಗಿದ್ದ ಸಂದರ್ಭದಲ್ಲಿ ಜೀತ ಪದ್ಧತಿ ನಿರ್ಮೂಲನಾ ಕಾಯ್ದೆಯನ್ನು ಜಾರಿಗೆ ತಂದು ಸಾಮಾಜಿಕ ಪರಿವರ್ತನೆಗೆ ಕಾರಣರಾದರು ಎಂದು ತಿಳಿಸಿದರು.

ಡಿ. ದೇವರಾಜ ಅರಸು ಅವರ ಅವಧಿಯಲ್ಲಿ ರಾಜ್ಯದ ‘ಮೈಸೂರು’ ಎಂಬ ಹೆಸರನ್ನು ‘ಕರ್ನಾಟಕ’ ಎಂದು ಮರುನಾಮಕರಣ ಮಾಡಲಾಯಿತು. ಹಿಂದುಳಿದ ವರ್ಗಗಳ ಜನರ ಅಭಿವೃದ್ಧಿಗಾಗಿ ವಿಶೇಷ ಯೋಜನೆಗಳನ್ನು ರೂಪಿಸುವ ಉದ್ದೇಶದಿಂದ ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯನ್ನು ಪ್ರಾರಂಭಿಸಿದರು.

ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ವಿದ್ಯಾರ್ಥಿ ನಿಲಯಗಳ ನಿರ್ಮಾಣಕ್ಕೂ ಅರಸು ಅವರ ಪಾತ್ರ ಮಹತ್ವದ್ದಾಗಿದೆ. ನೀರಾವರಿ ಯೋಜನೆಗಳಿಗೆ ಕಾರ್ಯರೂಪ ನೀಡಿ, ತಮ್ಮ ಅವಧಿಯಲ್ಲಿ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಕ್ಷೇತ್ರಗಳಲ್ಲಿ ಹಲವು ಯೋಜನೆಗಳನ್ನು ಜಾರಿಗೆ ತರುವ ಮೂಲಕ ಕರ್ನಾಟಕವನ್ನು ಪ್ರಗತಿಪರ ರಾಜ್ಯವನ್ನಾಗಿ ರೂಪಿಸುವಲ್ಲಿ ಪ್ರಮುಖ ಕೊಡುಗೆ ನೀಡಿದ್ದಾರೆ ಎಂದು ಹೇಳಿದರು.

ಡಿ. ದೇವರಾಜ ಅರಸು ಅವರ ಜನಪರ ಯೋಜನೆಗಳನ್ನು ಅನುಸರಿಸಿ, ಕರ್ನಾಟಕದ ಅಭಿವೃದ್ಧಿಗೆ ಎಲ್ಲರೂ ಶ್ರಮಿಸಬೇಕು ಎಂದು ಅವರು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶುಭನ್ವಿತಾ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ರಂಜಿತ್ ಜಿ.ಆರ್., ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಕುಮಾರ್ ಎಂ. ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande