
ಬಳ್ಳಾರಿ, 20 ಆಗಸ್ಟ್ (ಹಿ.ಸ.)
ಆ್ಯಂಕರ್ : ಕರ್ನಾಟಕ ಸರ್ಕಾರದ ಉದ್ಯಮವಾದ ಡಾ. ಬಾಬು ಜಗಜೀವನ್ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತ (ಲಿಡ್ಕರ್) ವತಿಯಿಂದ ಗೌರಿ-ಗಣೇಶ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ರಿಯಾಯಿತಿ ಮಾರಾಟ ಮೇಳವನ್ನು ಆಯೋಜಿಸಲಾಗಿದೆ.
ಆಗಸ್ಟ್ 21 ರಿಂದ ಸೆಪ್ಟೆಂಬರ್ 13 ರವರೆಗೆ (ಒಟ್ಟು 24 ದಿನಗಳ ಕಾಲ) ನಗರದ ಬುಡಾ ಕಾಂಪ್ಲೆಕ್ಸ್ನಲ್ಲಿರುವ ಲಿಡ್ಕರ್ ಲೆದರ್ ಎಂಪೋರಿಯಂನಲ್ಲಿ ಲಭ್ಯವಿರುವ ಎಲ್ಲಾ ನಮೂನೆಯ ಚರ್ಮದ ವಸ್ತುಗಳ (ಶೂ, ಚಪ್ಪಲಿ, ಬ್ಯಾಗ್, ಬೆಲ್ಟ್ ಇತ್ಯಾದಿ) ಖರೀದಿಯ ಮೇಲೆ ಶೇ.20ರಷ್ಟು ವಿಶೇಷ ರಿಯಾಯಿತಿ ನೀಡಲಾಗುತ್ತಿದೆ.
ಮಾರಾಟದ ಸ್ಥಳ: ಲಿಡ್ಕರ್ ಲೆದರ್ ಎಂಪೋರಿಯ0, ಮಳಿಗೆ ಸಂಖ್ಯೆ: 24, ಬುಡಾ ಕಾಂಪ್ಲೆಕ್ಸ್, ಬಳ್ಳಾರಿ.
ಸಮಯ: ಪ್ರತಿದಿನ ಬೆಳಿಗ್ಗೆ 10 ಗಂಟೆಯಿ0ದ ರಾತ್ರಿ 8 ಗಂಟೆಯವರೆಗೆ ಇರಲಿದೆ. ಹೆಚ್ಚಿನ ಮಾಹಿತಿಗಾಗಿ ದೂ.08392-271741, 9844667691 ಗೆ ಕರೆ ಮಾಡಬಹುದಾಗಿದೆ. ಸಾರ್ವಜನಿಕರು ಹಾಗೂ ಗ್ರಾಹಕರು ಈ ರಿಯಾಯಿತಿ ಮಾರಾಟ ಸೌಲಭ್ಯದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಲಿಡ್ಕರ್ ಜಿಲ್ಲಾ ಸಂಯೋಜಕರು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್