ವಿಜಯಪುರ: ವಿಬಿಜಿ ರಾಮ್ ಜಿ ಯೋಜನೆ ಸಮರ್ಪಕ ಅನುಷ್ಠಾನಕ್ಕೆ ಯೋಜನಾಧಿಕಾರಿ ಶ್ರೀಪಾದ ಹುರುಳಿಕೊಪ್ಪಿ ಸೂಚನೆ
ವಿಜಯಪುರ, 20 ಆಗಸ್ಟ್ (ಹಿ.ಸ.) ಆ್ಯಂಕರ್ : ವಿಜಯಪುರ ಜಿಲ್ಲೆಯ ತಾಳಿಕೋಟಿ ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗಾವಕಾಶ ಕಲ್ಪಿಸುವುದರ ಜೊತೆಗೆ ಸ್ಥಳೀಯವಾಗಿ ಶಾಶ್ವತ ಆಸ್ತಿಗಳನ್ನು ಸೃಜಿಸುವ ಉದ್ದೇಶದಿಂದ ವಿಬಿ-ಜಿ ರಾಮ್-ಜಿ ಯೋಜನೆಯಡಿ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಹಲವು ಅಭಿವೃದ್ಧಿ
ಉದ್ಯೋಗ


ವಿಜಯಪುರ, 20 ಆಗಸ್ಟ್ (ಹಿ.ಸ.)

ಆ್ಯಂಕರ್ : ವಿಜಯಪುರ ಜಿಲ್ಲೆಯ ತಾಳಿಕೋಟಿ ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗಾವಕಾಶ ಕಲ್ಪಿಸುವುದರ ಜೊತೆಗೆ ಸ್ಥಳೀಯವಾಗಿ ಶಾಶ್ವತ ಆಸ್ತಿಗಳನ್ನು ಸೃಜಿಸುವ ಉದ್ದೇಶದಿಂದ ವಿಬಿ-ಜಿ ರಾಮ್-ಜಿ ಯೋಜನೆಯಡಿ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಯೋಜನಾಧಿಕಾರಿ ಶ್ರೀಪಾದ ಹುರುಳಿಕೊಪ್ಪಿ ತಿಳಿಸಿದರು.

ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕೆರೆಗಳ ಪುನಶ್ಚೇತನ, ಕಂದಕ ನಿರ್ಮಾಣ ಸೇರಿದಂತೆ ಗ್ರಾಮೀಣ ಪರಿಸರ ಹಾಗೂ ಜಲಸಂರಕ್ಷಣೆಗೆ ಪೂರಕವಾದ ಕಾಮಗಾರಿಗಳಿಗೆ ಆದ್ಯತೆ ನೀಡಲಾಗುತ್ತಿದೆ. ಈ ಕಾಮಗಾರಿಗಳ ಮೂಲಕ ಗ್ರಾಮೀಣ ಭಾಗದ ಕೂಲಿಕಾರರಿಗೆ ಸ್ಥಳೀಯವಾಗಿಯೇ ಉದ್ಯೋಗ ದೊರೆಯುತ್ತಿದ್ದು, ಅವರ ಶ್ರಮ ಗ್ರಾಮಗಳ ಮೂಲಸೌಕರ್ಯ ಹಾಗೂ ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆಗೆ ಬಳಕೆಯಾಗುತ್ತಿದೆ.

ಕಾಮಗಾರಿಗಳಲ್ಲಿ ಸ್ಥಳೀಯ ಕೂಲಿಕಾರರು ಅತ್ಯಂತ ಉತ್ಸಾಹದಿಂದ ಭಾಗವಹಿಸುತ್ತಿದ್ದು, ಉದ್ಯೋಗದ ಜೊತೆಗೆ ತಮ್ಮದೇ ಗ್ರಾಮದ ಅಭಿವೃದ್ಧಿಗೆ ಕೊಡುಗೆ ನೀಡುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸುತ್ತಿದ್ದಾರೆ. ಕೆರೆಗಳ ಪುನಶ್ಚೇತನದಿಂದ ಮಳೆನೀರು ಸಂಗ್ರಹ ಸಾಮರ್ಥ್ಯ ಹೆಚ್ಚುವ ನಿರೀಕ್ಷೆಯಿದ್ದು, ಕಂದಕ ನಿರ್ಮಾಣ ಸೇರಿದಂತೆ ಮಣ್ಣು ಮತ್ತು ಜಲ ಸಂರಕ್ಷಣಾ ಕಾಮಗಾರಿಗಳು ಗ್ರಾಮೀಣ ಪ್ರದೇಶದ ಪರಿಸರ ಸಮತೋಲನಕ್ಕೆ ಸಹಕಾರಿಯಾಗಲಿವೆ.

ಗ್ರಾಮೀಣ ಜನರಿಗೆ ಜೀವನೋಪಾಯದ ಅವಕಾಶ ಕಲ್ಪಿಸುವುದರೊಂದಿಗೆ ಗ್ರಾಮಗಳಲ್ಲಿನ ಸಾರ್ವಜನಿಕ ಆಸ್ತಿಗಳ ಅಭಿವೃದ್ಧಿಗೂ ಒತ್ತು ನೀಡುತ್ತಿರುವುದು ಯೋಜನೆಯ ಪ್ರಮುಖ ಉದ್ದೇಶವಾಗಿದೆ. ಕೂಲಿಕಾರರ ಶ್ರಮದ ಫಲವಾಗಿ ನಿರ್ಮಾಣವಾಗುತ್ತಿರುವ ಕಾಮಗಾರಿಗಳು ಮುಂದಿನ ದಿನಗಳಲ್ಲಿ ಗ್ರಾಮೀಣ ಪ್ರದೇಶದ ಜನರಿಗೆ ದೀರ್ಘಕಾಲೀನವಾಗಿ ಅನುಕೂಲ ಕಲ್ಪಿಸುವ ನಿರೀಕ್ಷೆಯಿದೆ.

ವಿಬಿ-ಜಿ ರಾಮ್-ಜಿ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿಗಳು ‘ಶ್ರಮಕ್ಕೆ ಗೌರವ, ಉದ್ಯೋಗಕ್ಕೆ ಭದ್ರತೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ ವೇಗ’ ಎಂಬ ಆಶಯವನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿವೆ.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande