
ನವದೆಹಲಿ, 20 ಆಗಸ್ಟ್ (ಹಿ.ಸ.):
ಆ್ಯಂಕರ್:ಜಮ್ಮು-ಕಾಶ್ಮೀರ ಮತ್ತು ಲಡಾಖ್‌ಗೆ ಎರಡು ದಿನಗಳ ಪ್ರವಾಸ ಕೈಗೊಂಡಿರುವ ಭಾರತದಲ್ಲಿನ ಅಮೆರಿಕದ ರಾಯಭಾರಿ ಸರ್ಜಿಯೋ ಗೋರ ಅವರು ಶ್ರೀನಗರದ ಸೌಂದರ್ಯಕ್ಕೆ ಮನಸೋತಿದ್ದಾರೆ.
ಬುಧವಾರ ಶ್ರೀನಗರಕ್ಕೆ ಆಗಮಿಸಿದ ಅವರು ಪ್ರಸಿದ್ಧ ದಾಲ್ ಸರೋವರ ಹಾಗೂ ಪರಿ ಮಹಲ್‌ಗೆ ಭೇಟಿ ನೀಡಿ ಅಲ್ಲಿನ ಪ್ರಕೃತಿ ಸೌಂದರ್ಯವನ್ನು ಕೊಂಡಾಡಿದ್ದಾರೆ. ಈ ಕುರಿತು ‘ಎಕ್ಸ್’ನಲ್ಲಿ ತಮ್ಮ ಅನುಭವ ಹಂಚಿಕೊಂಡಿರುವ ಅವರು, ದಾಲ್ ಸರೋವರ ಮತ್ತು ಪರಿ ಮಹಲ್‌ನ ಸೌಂದರ್ಯವನ್ನು ಕಣ್ತುಂಬಿಕೊಳ್ಳುವುದು ಅದ್ಭುತ ಅನುಭವ ಎಂದು ಹೇಳಿದ್ದಾರೆ.
ಶ್ರೀನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸರ್ಜಿಯೋ ಗೋರ, ಜಮ್ಮು-ಕಾಶ್ಮೀರಕ್ಕೆ ಅಮೆರಿಕ ನೀಡಿರುವ ಪ್ರಯಾಣ ಸಲಹೆಯನ್ನು ಪರಿಶೀಲಿಸುವುದಾಗಿ ತಿಳಿಸಿದ್ದಾರೆ. ಕೇಂದ್ರ ಸರ್ಕಾರ ಹಾಗೂ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಪ್ರದೇಶವನ್ನು ಮತ್ತಷ್ಟು ಸುರಕ್ಷಿತಗೊಳಿಸಲು ಕೈಗೊಂಡಿರುವ ಕ್ರಮಗಳನ್ನು ಪರಿಗಣಿಸಲಾಗುವುದು ಎಂದರು.
ಜಮ್ಮು-ಕಾಶ್ಮೀರ ಭಾರತದ ಪ್ರಮುಖ ಭಾಗವಾಗಿದ್ದು, ಅತ್ಯಂತ ಸುಂದರ ಪ್ರದೇಶವಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
--------
ಹಿಂದೂಸ್ತಾನ್ ಸಮಾಚಾರ್ / Rakesh.M.B.