
ಬಳ್ಳಾರಿ, 21 ಆಗಸ್ಟ್ (ಹಿ.ಸ.)
ಆ್ಯಂಕರ್: ಕರ್ನಾಟಕ ಸರ್ಕಾರದ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ 2026-27ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ನಂತರ ಉನ್ನತ ವ್ಯಾಸಂಗ ಮಾಡುತ್ತಿರುವ ವಿಕಲಚೇತನ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ ಯೋಜನೆಯಡಿ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಎಸ್.ಎಸ್.ಎಲ್.ಸಿ ನಂತರ ಉನ್ನತ ಶಿಕ್ಷಣ, ವೃತ್ತಿ ಶಿಕ್ಷಣ, ತಾಂತ್ರಿಕ ಶಿಕ್ಷಣ, ಸ್ನಾತಕೋತ್ತರ ಹಾಗೂ ಔದ್ಯೋಗಿಕ ಶಿಕ್ಷಣಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿಕಲಚೇತನ ವಿದ್ಯಾರ್ಥಿಗಳಿಗೆ ಸರ್ಕಾರ ನಿಗದಿಪಡಿಸಿರುವ ಬೋಧನಾ ಶುಲ್ಕ, ಪರೀಕ್ಷಾ ಶುಲ್ಕ, ಪ್ರಯೋಗಾಲಯ ಶುಲ್ಕ, ಕ್ರೀಡಾ ಶುಲ್ಕ ಹಾಗೂ ಗ್ರಂಥಾಲಯ ಶುಲ್ಕಗಳನ್ನು ಈ ಯೋಜನೆಯಡಿ ಮರುಪಾವತಿಸಲಾಗುತ್ತದೆ.
ಆಸಕ್ತ ಮತ್ತು ಅರ್ಹ ವಿದ್ಯಾರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಲು 2026ರ ಡಿಸೆಂಬರ್ 31 ಕೊನೆಯ ದಿನಾಂಕವಾಗಿದೆ.
ಹೆಚ್ಚಿನ ಮಾಹಿತಿಗೆ ಬಳ್ಳಾರಿ/ಕಂಪ್ಲಿ-8880875620, ಕುರುಗೋಡು-9538000887, ಸಿರುಗುಪ್ಪ-9743509698, ಸಂಡೂರು-9632052270 ಅಥವಾ ಇಲಾಖಾ ಕಚೇರಿ ದೂ.08392-267886 ಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್