
ಬಳ್ಳಾರಿ, 21 ಆಗಸ್ಟ್ (ಹಿ.ಸ.)
ಆ್ಯಂಕರ್: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ರವರ ಬದುಕು ಹಾಗೂ ಸಾಧನೆಗಳ ಪರಿಚಯದ ಅಂಗವಾಗಿ ‘ಅಂಬೇಡ್ಕರ್ ಓದು’ ವಿಶೇಷ ಕಾರ್ಯಕ್ರಮ ಮತ್ತು ಪ್ರಬಂಧ ಸ್ಪರ್ಧಾ ವಿಜೇತರಿಗೆ ಪುಸ್ತಕ ಬಹುಮಾನ ವಿತರಣಾ ಸಮಾರಂಭವನ್ನು ಆಯೋಜಿಸಲಾಗಿದೆ.
ಈ ಕಾರ್ಯಕ್ರಮವು ಆಗಸ್ಟ್ 24 ರಂದು ಬೆಳಗ್ಗೆ 11 ಗಂಟೆಗೆ ನಗರದ ಸರಳಾದೇವಿ ಸತೀಶ್ಚಂದ್ರ ಅಗರ್ವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು (ಸ್ವಾಯತ್ತ) ಸಭಾಂಗಣದಲ್ಲಿ ಜರುಗಲಿದೆ.
ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಸಚಿವ(ಮೌಲ್ಯಮಾಪನ) ಪ್ರೊ. ಎನ್.ಎಂ. ಸಾಲಿ ಅವರು ಕಾರ್ಯಕ್ರಮ ಉದ್ಘಾಟಿಸುವರು.
ಸರಳಾದೇವಿ ಸತೀಶ್ಚಂದ್ರ ಅಗರ್ವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ. ಪ್ರಹ್ಲಾದ್ ಚೌದ್ರಿ .ಜಿ ಅವರು ಅಧ್ಯಕ್ಷತೆ ವಹಿಸುವರು.
ಶ್ರೀ ಸತ್ಯಂ ಶಿಕ್ಷಣ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಆಲಂಭಾಷಾ ಅವರು ವಿಶೇಷ ಉಪನ್ಯಾಸ ನೀಡುವರು.
ಮುಖ್ಯ ಅತಿಥಿಗಳಾಗಿ ಬೆಂಗಳೂರಿನ ರಾಷ್ಟಿಯ ಸಂತಕವಿ ಕನಕದಾಸ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಸದಸ್ಯ ಡಾ. ದಸ್ತಗೀರಸಾಬ್ ದಿನ್ನಿ, ಸರಳಾದೇವಿ ಸತೀಶ್ಚಂದ್ರ ಅಗರ್ವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ ವಿಭಾಗದ ಮುಖ್ಯಸ್ಥ ಪ್ರೊ. ಹೊನ್ನೂರಾಲಿ, ಪತ್ರಾಂಕಿತ ವ್ಯವಸ್ಥಾಪಕ ಫಕೀರಪ್ಪ ಬೇವಿನಗಿಡದ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿರುವರು ಎಂದು ಕನ್ನಡ ಮತ್ತು ಸಂಸ್ಕಥತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ. ನಾಗರಾಜ ಅವರು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್