
ಬೆಂಗಳೂರು, 21 ಆಗಸ್ಟ್ (ಹಿ.ಸ.):
ಆ್ಯಂಕರ್:ಸ್ಕಾಟ್ಲೆಂಡ್‌ನ ಗ್ಲಾಸ್ಕೋದಲ್ಲಿ ನಡೆದ ಕಾಮನ್‌ವೆಲ್ತ್ ಕ್ರೀಡಾಕೂಟ–2026ರಲ್ಲಿ ಮಹಿಳೆಯರ ಪ್ಯಾರಾ ಶಾಟ್‌ಪುಟ್ ವಿಭಾಗದಲ್ಲಿ ಕಂಚಿನ ಪದಕ ಗೆದ್ದ ಕರ್ನಾಟಕದ ಕ್ರೀಡಾಪಟು ಕೆ.ಎಸ್. ಶಿಲ್ಪ ಅವರನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶುಕ್ರವಾರ ವಿಧಾನಸೌಧದ ತಮ್ಮ ಕಚೇರಿಯಲ್ಲಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಶಿಲ್ಪ ಅವರಿಗೆ ಪ್ರೋತ್ಸಾಹಧನವಾಗಿ ₹20 ಲಕ್ಷ ಮೊತ್ತದ ಚೆಕ್ ಅನ್ನು ವಿತರಿಸಲಾಯಿತು. ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ, ಶಾಸಕ ರವಿಶಂಕರ್, ಕರ್ನಾಟಕ ಒಲಿಂಪಿಕ್ ಅಸೋಸಿಯೇಷನ್ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಗೋವಿಂದರಾಜು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.