
ಬೆಂಗಳೂರು, 21 ಆಗಸ್ಟ್ (ಹಿ.ಸ.):
ಆ್ಯಂಕರ್:ದಲಿತರಿಗೆ ಸೇರಬೇಕಿದ್ದ ₹189 ಕೋಟಿ ಅನುದಾನವನ್ನು ಕಳೆದ ಮೂರೂವರೆ ವರ್ಷಗಳಿಂದ ನೀಡದೆ ಕಾಂಗ್ರೆಸ್ ಸರ್ಕಾರ ಅನ್ಯಾಯ ಮಾಡಿದೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ ಆರೋಪಿಸಿದರು.
ವಾಲ್ಮೀಕಿ ಪ್ರತಿಮೆ ಬಳಿ ನಡೆದ ಪ್ರತಿಭಟನೆ ವೇಳೆ ಮಾಧ್ಯಮಗಳಿಗೆ ಮಾತನಾಡಿದ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಅಕ್ರಮದ ಗಂಭೀರ ಆರೋಪಗಳಿಗೆ ಉತ್ತರ ನೀಡುವ ಬದಲು, ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ಅವರನ್ನು ರಕ್ಷಿಸಲು ಕಾಂಗ್ರೆಸ್ ಸರ್ಕಾರ ಮುಂದಾಗಿದೆ ಎಂದು ಅವರು ವಾಗ್ದಾಳಿ ನಡೆಸಿದರು.
ಒಬ್ಬ ಸಚಿವರನ್ನು ರಕ್ಷಿಸುವ ಸಲುವಾಗಿ ಜನರ ಧ್ವನಿಯಾಗಿರುವ ಪ್ರತಿಪಕ್ಷದ ಹೋರಾಟವನ್ನೇ ಹತ್ತಿಕ್ಕಲು ಸರ್ಕಾರ ಪ್ರಯತ್ನಿಸುತ್ತಿರುವುದು ಕಾಂಗ್ರೆಸ್ ಸರ್ಕಾರದ ಮತ್ತೊಂದು ಪ್ರಜಾಪ್ರಭುತ್ವ ವಿರೋಧಿ ನಡೆ ಎಂದು ಆರ್. ಅಶೋಕ ಟೀಕಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.