ಆ. 27 ರಂದು ಕೊಪ್ಪಳ ತಾಲೂಕು ಗ್ಯಾರಂಟಿ ಯೋಜನೆಗಳ ಸಭೆ
ಕೊಪ್ಪಳ, 21 ಆಗಸ್ಟ್ (ಹಿ.ಸ.) ಆ್ಯಂಕರ್ : ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತು ಚರ್ಚಿಸಲು ಕೊಪ್ಪಳ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆಯನ್ನು ಆಗಸ್ಟ್ 27 ರಂದು ಬೆಳಿಗ್ಗೆ 11 ಗಂಟೆಗೆ ತಾಲೂಕು ಪಂಚಾಯತಿಯ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಕೊಪ್ಪಳ ತಾಲೂಕು ಮಟ್ಟ
ಆ. 27 ರಂದು ಕೊಪ್ಪಳ ತಾಲೂಕು ಗ್ಯಾರಂಟಿ ಯೋಜನೆಗಳ ಸಭೆ


ಕೊಪ್ಪಳ, 21 ಆಗಸ್ಟ್ (ಹಿ.ಸ.)

ಆ್ಯಂಕರ್ : ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತು ಚರ್ಚಿಸಲು ಕೊಪ್ಪಳ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆಯನ್ನು ಆಗಸ್ಟ್ 27 ರಂದು ಬೆಳಿಗ್ಗೆ 11 ಗಂಟೆಗೆ ತಾಲೂಕು ಪಂಚಾಯತಿಯ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಕೊಪ್ಪಳ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಬಾಲಚಂದ್ರನ್ ಸ್ಯಾಮುವೆಲ್ ಅವರು ಸಭೆಯ ಅಧ್ಯಕ್ಷತೆ ವಹಿಸುವರು. ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಸಂಪೂರ್ಣ ಮಾಹಿತಿಯೊಂದಿಗೆ ಖುದ್ದಾಗಿ ಸಭೆಗೆ ಹಾಜರಾಗುವಂತೆ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಹಾಗೂ ತಾಲೂಕು ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿಗಳು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande