ಕುಡತಿನಿ: ಆಗಸ್ಟ್ 24ರಂದು ನೇರ ಉದ್ಯೋಗ ಸಂದರ್ಶನ
ಬಳ್ಳಾರಿ, 21 ಆಗಸ್ಟ್ (ಹಿ.ಸ.) ಆ್ಯಂಕರ್: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಗೂ ಇಂಡಸ್ಇ0ಡ್ ಬ್ಯಾಂಕ್ (ಭಾರತ್ ಫೈನಾನ್ಶಿಯಲ್ ಇನ್ಕ್ಲೂಷನ್ ಲಿಮಿಟೆಡ್) ಸಹಯೋಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗಾಗಿ ಆಗಸ್ಟ್ 24 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 02 ಗಂಟೆಯವರೆಗೆ ಕುಡತಿನಿ ಪಟ್ಟಣದ ಕಂ
ಕುಡತಿನಿ: ಆಗಸ್ಟ್ 24ರಂದು ನೇರ ಉದ್ಯೋಗ ಸಂದರ್ಶನ


ಬಳ್ಳಾರಿ, 21 ಆಗಸ್ಟ್ (ಹಿ.ಸ.)

ಆ್ಯಂಕರ್: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಗೂ ಇಂಡಸ್ಇ0ಡ್ ಬ್ಯಾಂಕ್ (ಭಾರತ್ ಫೈನಾನ್ಶಿಯಲ್ ಇನ್ಕ್ಲೂಷನ್ ಲಿಮಿಟೆಡ್) ಸಹಯೋಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗಾಗಿ ಆಗಸ್ಟ್ 24 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 02 ಗಂಟೆಯವರೆಗೆ ಕುಡತಿನಿ ಪಟ್ಟಣದ ಕಂಪ್ಲಿ ಅಲ್ಲಂ ತಿಮ್ಮಪ್ಪನವರ ಕಲ್ಯಾಣ ಮಂಟಪದ ಭಾರತ್ ಫೈನಾನ್ಶಿಯಲ್ ಇನ್ಕ್ಲೂಷನ್ ಲಿಮಿಟೆಡ್ (ಕುಡತಿನಿ ಬ್ರಾಂಚ್ ಆಫೀಸ್ ಹತ್ತಿರ) ಕಚೇರಿಯಲ್ಲಿ ನೇರ ಸಂದರ್ಶನ ಹಮ್ಮಿಕೊಳ್ಳಲಾಗಿದೆ.

ಕುಡತಿನಿ, ಸಂಡೂರು, ಬಳ್ಳಾರಿ ಹಾಗೂ ಕೂಡ್ಲಿಗಿ ತಾಲೂಕುಗಳಲ್ಲಿ ಕರ್ತವ್ಯ ನಿರ್ವಹಿಸಲು ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ನೇರ ಸಂದರ್ಶನದಲ್ಲಿ ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ (ಉಚಿತ ಪ್ರವೇಶ).

ವಿದ್ಯಾರ್ಹತೆ: ಪಿಯುಸಿ ಅಥವಾ ಯಾವುದೇ ಪದವಿ.

ವಿಶೇಷ ಸೂಚನೆ: ಅಭ್ಯರ್ಥಿಗಳಿಗೆ ದ್ವಿಚಕ್ರ ವಾಹನ ಕಡ್ಡಾಯವಾಗಿ ಇರಬೇಕು. ಆಸಕ್ತ ಅಭ್ಯರ್ಥಿಗಳು ತಮ್ಮ ಆಧಾರ್ ಕಾರ್ಡ್ ಪ್ರತಿ ಹಾಗೂ ಸ್ವ-ವಿವರವುಳ್ಳ ರೆಸ್ಯೂಮ್ ಜೊತೆಗೆ ನಿಗದಿತ ಸ್ಥಳದಲ್ಲಿ ಸಂದರ್ಶನಕ್ಕೆ ಹಾಜರಾಗಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಅಥವಾ ಮೊ. 7619207762, 9663263086, 7676774293 ಅಥವಾ 6360408094 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಹಟ್ಟಪ್ಪ ಅವರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande