ಜಂತರ್ ಮಂತರ್ ಪ್ರತಿಭಟನೆ: ವಿದ್ಯಾರ್ಥಿ ಪರ ಪ್ರಕರಣ ದಾಖಲಿಸಲು ಆಗ್ರಹಿಸಿ ರಾಹುಲ್ ಗಾಂಧಿ ಧರಣಿ
ನವದೆಹಲಿ, 21 ಆಗಸ್ಟ್ (ಹಿ.ಸ.): ಆ್ಯಂಕರ್:ವಿದ್ಯಾರ್ಥಿ ಪ್ರತಿಭಟನೆ ವೇಳೆ ಗಂಭೀರವಾಗಿ ಗಾಯಗೊಂಡಿರುವ ಸಾಹಿಲ್ ಲೋಚವ್ ಪರ ಎಫ್‌ಐಆರ್ ದಾಖಲಿಸುವಂತೆ ಆಗ್ರಹಿಸಿ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಶುಕ್ರವಾರ ಸಂಸತ್ ಮಾರ್ಗದಲ್ಲಿರುವ ಪೊಲೀಸ್ ಉಪ ಆಯುಕ್ತರ ಕಚೇರಿ ಎದುರು ಧರಣಿ ನಡೆಸಿದರು. ಸಾಹಿಲ
कांग्रेस नेता राहुल गांधी डीसीपी कार्यालय में मौजूद।


ನವದೆಹಲಿ, 21 ಆಗಸ್ಟ್ (ಹಿ.ಸ.):

ಆ್ಯಂಕರ್:ವಿದ್ಯಾರ್ಥಿ ಪ್ರತಿಭಟನೆ ವೇಳೆ ಗಂಭೀರವಾಗಿ ಗಾಯಗೊಂಡಿರುವ ಸಾಹಿಲ್ ಲೋಚವ್ ಪರ ಎಫ್‌ಐಆರ್ ದಾಖಲಿಸುವಂತೆ ಆಗ್ರಹಿಸಿ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಶುಕ್ರವಾರ ಸಂಸತ್ ಮಾರ್ಗದಲ್ಲಿರುವ ಪೊಲೀಸ್ ಉಪ ಆಯುಕ್ತರ ಕಚೇರಿ ಎದುರು ಧರಣಿ ನಡೆಸಿದರು.

ಸಾಹಿಲ್ ಲೋಚವ್ ಹಾಗೂ ಅವರ ತಾಯಿಯೊಂದಿಗೆ ಡಿಸಿಪಿ ಕಚೇರಿಗೆ ತೆರಳಿದ ರಾಹುಲ್ ಗಾಂಧಿ, ವಿದ್ಯಾರ್ಥಿ ಮೇಲೆ ನಡೆದ ಪೊಲೀಸ್ ಕ್ರಮದ ಕುರಿತು ಎಫ್‌ಐಆರ್ ದಾಖಲಿಸುವಂತೆ ಒತ್ತಾಯಿಸಿದರು. ಬಳಿಕ ತಮ್ಮ ಬೇಡಿಕೆಗೆ ಬೆಂಬಲವಾಗಿ ಕಚೇರಿ ಹೊರಗೆ ಕುಳಿತು ಪ್ರತಿಭಟನೆ ನಡೆಸಿದರು.

ರಾಹುಲ್ ಗಾಂಧಿ ಅವರು ಸಾಮಾಜಿಕ ಜಾಲತಾಣದ ಮೂಲಕ ಆರೋಪಿಸಿ, ಜುಲೈ 20ರಂದು ಜಂತರ್ ಮಂತರ್‌ನಲ್ಲಿ ನಡೆದ ‘ಸಂಸತ್ ಚಲೋ’ ಮೆರವಣಿಗೆ ವೇಳೆ ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದ ಸಾಹಿಲ್ ಮೇಲೆ ಪೊಲೀಸರು ಗುಂಡು ಹಾರಿಸಿದ್ದು, ಇದರಿಂದ ಅವರ ಕಣ್ಣಿನ ದೃಷ್ಟಿಗೆ ಗಂಭೀರ ಅಪಾಯ ಎದುರಾಗಿದೆ ಎಂದು ಹೇಳಿದ್ದಾರೆ. ಸಾಹಿಲ್ ಸೇರಿದಂತೆ ಹಲವು ವಿದ್ಯಾರ್ಥಿಗಳು ಪ್ರತಿಭಟನೆಯ ವೇಳೆ ಗಾಯಗೊಂಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಸಾಹಿಲ್ ಅವರ ತಾಯಿ ಎಫ್‌ಐಆರ್ ದಾಖಲಿಸಲು ಹಲವು ಬಾರಿ ಪೊಲೀಸ್ ಠಾಣೆಗೆ ತೆರಳಿದ್ದರೂ ಅವಕಾಶ ನೀಡಲಾಗಿಲ್ಲ ಎಂದು ರಾಹುಲ್ ಗಾಂಧಿ ಆರೋಪಿಸಿದರು. ಶಾಂತಿಯುತ ಪ್ರತಿಭಟನೆಯ ವಿರುದ್ಧದ ಇಂತಹ ಕ್ರಮ ಕಾನೂನುಬಾಹಿರವಾಗಿದ್ದು, ಸಂವಿಧಾನಾತ್ಮಕ ಹಕ್ಕುಗಳನ್ನು ಉಲ್ಲಂಘಿಸುವ ಗಂಭೀರ ಅಪರಾಧವಾಗಿದೆ ಎಂದು ಅವರು ಹೇಳಿದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹಲವು ದಿನಗಳ ಕಾಲ ಸಂಸತ್ತಿಗೆ ಹಾಜರಾಗಿರಲಿಲ್ಲ. ವಿದ್ಯಾರ್ಥಿಗಳ ಮೇಲೆ ಗುಂಡು ಹಾರಿಸಲು ಆದೇಶ ನೀಡಿದ್ದು ಯಾರು ಎಂಬುದನ್ನು ದೇಶಕ್ಕೆ ತಿಳಿಸಿಲ್ಲ ಎಂದು ರಾಹುಲ್ ಗಾಂಧಿ ಆರೋಪಿಸಿದರು. ಪ್ರತಿಭಟನಾಕಾರರ ಮೇಲೆ ಲಾಠಿಚಾರ್ಜ್, ಅಶ್ರುವಾಯು ಹಾಗೂ ಗುಂಡುಗಳ ಬಳಕೆಯಾಗಿದ್ದು, ಹಲವು ಯುವಕರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದರು.

ಪ್ರಧಾನಿ ನರೇಂದ್ರ ಮೋದಿ ಈ ವಿಚಾರದ ಕುರಿತು ಇದುವರೆಗೆ ಯಾವುದೇ ಹೇಳಿಕೆ ನೀಡಿಲ್ಲ ಹಾಗೂ ಗೃಹ ಸಚಿವರು ಹೊಣೆಗಾರಿಕೆಯಿಂದ ನುಣುಚಿಕೊಳ್ಳುತ್ತಿದ್ದಾರೆ ಎಂದು ಅವರು ಟೀಕಿಸಿದರು.

ಗಾಯಗೊಂಡಿರುವ ಸಾಹಿಲ್ ಸೇರಿದಂತೆ ಯಾವುದೇ ವಿದ್ಯಾರ್ಥಿ ಒಂಟಿಯಲ್ಲ. ಕಾಂಗ್ರೆಸ್ ಪಕ್ಷ ಪ್ರತಿಯೊಬ್ಬ ಸಂತ್ರಸ್ತ ಯುವಕರ ಪರವಾಗಿ ನಿಲ್ಲಲಿದೆ. ಅವರ ಧ್ವನಿಯನ್ನು ಹತ್ತಿಕ್ಕಲು ಬಿಡುವುದಿಲ್ಲ ಮತ್ತು ನ್ಯಾಯ ದೊರಕಿಸುವವರೆಗೆ ಹೋರಾಟ ಮುಂದುವರಿಸಲಾಗುವುದು ಎಂದು ರಾಹುಲ್ ಗಾಂಧಿ ಹೇಳಿದರು.

--------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande