ಯುವಶಕ್ತಿಯನ್ನು ದೇಶದ ಪ್ರಗತಿಗೆ ಬಳಸಲು ಆರ್ಎಸ್ಎಸ್ ಕಾರ್ಯಯೋಜನೆ
ಹೈದರಾಬಾದ್, 21 ಆಗಸ್ಟ್ (ಹಿ.ಸ.): ಆ್ಯಂಕರ್: ರಾಷ್ಟ್ರೀಯ ಸ್ವಯಂಸೇವಕ ಸಂಘದ ವಾರ್ಷಿಕ ಅಖಿಲ ಭಾರತ ಸಮನ್ವಯ ಸಭೆ ಆಗಸ್ಟ್ 19ರಿಂದ 21ರವರೆಗೆ ವಿಶಾಖಪಟ್ಟಣಂನ ಗುಡಿಲೋವಾದ ವಿಜ್ಞಾನ ವಿಹಾರ ಶಾಲೆಯಲ್ಲಿ ನಡೆಯಿತು. ಸಂಘದ ಸರಸಂಘಚಾಲಕ ಡಾ. ಮೋಹನ್ ಭಾಗವತ್ ಮತ್ತು ಸರ ಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಅವರ
संघ की समन्वय बैठक की जानकारी देते अधिकारी


ಹೈದರಾಬಾದ್, 21 ಆಗಸ್ಟ್ (ಹಿ.ಸ.):

ಆ್ಯಂಕರ್:

ರಾಷ್ಟ್ರೀಯ ಸ್ವಯಂಸೇವಕ ಸಂಘದ ವಾರ್ಷಿಕ ಅಖಿಲ ಭಾರತ ಸಮನ್ವಯ ಸಭೆ ಆಗಸ್ಟ್ 19ರಿಂದ 21ರವರೆಗೆ ವಿಶಾಖಪಟ್ಟಣಂನ ಗುಡಿಲೋವಾದ ವಿಜ್ಞಾನ ವಿಹಾರ ಶಾಲೆಯಲ್ಲಿ ನಡೆಯಿತು. ಸಂಘದ ಸರಸಂಘಚಾಲಕ ಡಾ. ಮೋಹನ್ ಭಾಗವತ್ ಮತ್ತು ಸರ ಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ರಾಷ್ಟ್ರೀಯ ವಿಚಾರಗಳು, ಸಂಘಟನಾ ಸಮನ್ವಯ ಹಾಗೂ ಸಾಮಾಜಿಕ ಸುಧಾರಣೆಗಳ ಕುರಿತು ಚರ್ಚೆ ನಡೆಸಲಾಯಿತು. ಸಂಘದಿಂದ ಪ್ರೇರಿತ 32 ಸಂಘಟನೆಗಳ 306 ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಸಭೆಯ ಸಮಾರೋಪಕ್ಕೂ ಮುನ್ನ ಅಖಿಲ ಭಾರತ ಪ್ರಚಾರ ಪ್ರಮುಖ ಸುನಿಲ್ ಅಂಬೇಕರ್ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮೂರು ದಿನಗಳ ಸಭೆಯಲ್ಲಿ ಚರ್ಚಿಸಲಾದ ಪ್ರಮುಖ ವಿಷಯಗಳ ಕುರಿತು ಮಾಹಿತಿ ನೀಡಿದರು. ಜೆಎನ್‌ಯು ಚಳವಳಿಯಿಂದ ಹಿಡಿದು ಜನಸಂಖ್ಯಾ ಅಸಮತೋಲನ, ಯುವಜನರಲ್ಲಿ ಹೆಚ್ಚುತ್ತಿರುವ ಮಾದಕ ವಸ್ತುಗಳ ಬಳಕೆ, ಕೃತಕ ಬುದ್ಧಿಮತ್ತೆ ಹಾಗೂ ಕುಟುಂಬ ಪ್ರಬೋಧನ ಸೇರಿದಂತೆ ಹಲವು ವಿಚಾರಗಳ ಕುರಿತು ಸಭೆಯಲ್ಲಿ ವಿಸ್ತೃತ ಚರ್ಚೆ ನಡೆಯಿತು ಎಂದು ತಿಳಿಸಿದರು.

ಯುವಜನರಲ್ಲಿ ಅಪಾರ ಶಕ್ತಿ ಮತ್ತು ಸಾಮರ್ಥ್ಯವಿದ್ದು, ಅದನ್ನು ದೇಶದ ಪ್ರಗತಿಗೆ ಸಕಾರಾತ್ಮಕವಾಗಿ ಬಳಸಿಕೊಳ್ಳುವ ಅಗತ್ಯವಿದೆ ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು. ಈ ಹಿನ್ನೆಲೆಯಲ್ಲಿ ಸಂಘದೊಂದಿಗೆ ಸಂಪರ್ಕ ಹೊಂದಿರುವ ಯುವ ಸಂಘಟನೆಗಳು, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಹಾಗೂ ಬಜರಂಗದಳ ವಿಶೇಷ ಕಾರ್ಯಯೋಜನೆ ರೂಪಿಸುವ ಅಗತ್ಯವಿದೆ ಎಂದು ಚರ್ಚಿಸಲಾಯಿತು.

ದೇಶದ ಕೆಲವು ಭಾಗಗಳಲ್ಲಿ ಕಂಡುಬರುತ್ತಿರುವ ಜನಸಂಖ್ಯಾ ಅಸಮತೋಲನದಿಂದ ಉಂಟಾಗುತ್ತಿರುವ ಸಮಸ್ಯೆಗಳ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯಿತು. ಕೆಲವು ಪ್ರದೇಶಗಳಲ್ಲಿ ನಿರ್ದಿಷ್ಟ ಸಮುದಾಯದ ಜನಸಂಖ್ಯೆಯಲ್ಲಿ ಕಂಡುಬರುತ್ತಿರುವ ಅಸಾಮಾನ್ಯ ಏರಿಕೆಯಿಂದ ಸಾಮಾಜಿಕ ಸಾಮರಸ್ಯದ ಮೇಲೆ ಪರಿಣಾಮ ಬೀರುತ್ತಿದೆ ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು. ಈ ನಿಟ್ಟಿನಲ್ಲಿ ಸರ್ಕಾರ ಹಾಗೂ ಸ್ವಯಂಸೇವಾ ಸಂಸ್ಥೆಗಳು ಮುಂದಾಗಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಭೆಯಲ್ಲಿ ಒತ್ತಾಯಿಸಲಾಯಿತು ಎಂದು ಅಂಬೇಕರ ಹೇಳಿದರು.

ಸಂತ ರವಿದಾಸರ ಪುಣ್ಯತಿಥಿ ಅಂಗವಾಗಿ ನಡೆದ ಕಾರ್ಯಕ್ರಮಗಳನ್ನೂ ಸಭೆಯಲ್ಲಿ ಪರಿಶೀಲಿಸಲಾಯಿತು. ಸಾಮಾಜಿಕ ಸಾಮರಸ್ಯದ ದೃಷ್ಟಿಯಿಂದ ಇಂತಹ ಕಾರ್ಯಕ್ರಮಗಳು ಮಹತ್ವದ್ದಾಗಿದ್ದು, ಮುಂದಿನ ದಿನಗಳಲ್ಲಿಯೂ ಅವುಗಳನ್ನು ಮುಂದುವರಿಸುವ ಸಂಕಲ್ಪ ವ್ಯಕ್ತವಾಯಿತು.

ಸಂಘದ ಶತಮಾನೋತ್ಸವದ ಅಂಗವಾಗಿ ಕೈಗೊಂಡಿರುವ ಪಂಚ ಪರಿವರ್ತನಾ ಅಭಿಯಾನದ ಪ್ರಗತಿಯನ್ನೂ ಪರಿಶೀಲಿಸಲಾಯಿತು. ಕುಟುಂಬ ಪ್ರಬೋಧನದ ಕಾರ್ಯಕ್ಕೆ ಮತ್ತಷ್ಟು ವೇಗ ನೀಡಲು ಸಭೆಯಲ್ಲಿ ಒಮ್ಮತ ವ್ಯಕ್ತವಾಯಿತು ಎಂದು ಸುನೀಲ್ ಅಂಬೇಕರ ತಿಳಿಸಿದರು.

--------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande