ಮುಧೋಳ ರಸ್ತೆಯಲ್ಲಿ ಉರುಳಿ ಬಿದ್ದ ಗರಸು ತುಂಬಿದ್ದ ಟಿಪ್ಪರ್
ಬಾಗಲಕೋಟೆ, 21 ಆಗಸ್ಟ್ (ಹಿ.ಸ.) ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಬೀಳಗಿ ಪಟ್ಟಣದ ಹೊರವಲಯದ ಬೀಳಗಿ–ಮುಧೋಳ ರಸ್ತೆಯಲ್ಲಿ ಗರಸು ತುಂಬಿಕೊಂಡು ಸಾಗುತ್ತಿದ್ದ ಟಿಪ್ಪರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಶುಕ್ರವಾರ ಬೆಳಗಿನ ಜಾವ ಸಂಭವಿಸಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿ
ಲಾರಿ


ಬಾಗಲಕೋಟೆ, 21 ಆಗಸ್ಟ್ (ಹಿ.ಸ.)

ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಬೀಳಗಿ ಪಟ್ಟಣದ ಹೊರವಲಯದ ಬೀಳಗಿ–ಮುಧೋಳ ರಸ್ತೆಯಲ್ಲಿ ಗರಸು ತುಂಬಿಕೊಂಡು ಸಾಗುತ್ತಿದ್ದ ಟಿಪ್ಪರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಶುಕ್ರವಾರ ಬೆಳಗಿನ ಜಾವ ಸಂಭವಿಸಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಗರಸು ಸಾಗಿಸುತ್ತಿದ್ದ ಟಿಪ್ಪರ್ ಬೀಳಗಿ ಕಡೆಯಿಂದ ಮುಧೋಳದತ್ತ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ರಸ್ತೆ ಬದಿಗೆ ಉರುಳಿ ಪಲ್ಟಿಯಾಗಿದೆ. ಟಿಪ್ಪರ್ ಪಲ್ಟಿಯಾದ ಪರಿಣಾಮ ಅದರಲ್ಲಿದ್ದ ಗರಸು ರಸ್ತೆಯ ಬದಿಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು, ಕೆಲಕಾಲ ವಾಹನ ಸವಾರರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಘಟನೆ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ವಾಹನಗಳಿಗೆ ಕೆಲಕಾಲ ತೊಂದರೆ ಉಂಟಾಗಿ, ವಾಹನ ಸಂಚಾರಕ್ಕೆ ಅಡಚಣೆ ಎದುರಾಯಿತು. ಕೂಡಲೇ ಸ್ಥಳೀಯರು ಹಾಗೂ ಸಂಬಂಧಿಸಿದವರು ಜೆಸಿಬಿ ನೆರವಿನಿಂದ ಪಲ್ಟಿಯಾಗಿದ್ದ ಟಿಪ್ಪರ್ನ್ನು ತೆರವುಗೊಳಿಸುವ ಕಾರ್ಯ ಕೈಗೊಂಡರು. ಬಳಿಕ ರಸ್ತೆಯಲ್ಲಿ ವಾಹನ ಸಂಚಾರವನ್ನು ಸಹಜ ಸ್ಥಿತಿಗೆ ತರಲಾಯಿತು.

ಘಟನೆಯ ಕುರಿತು ಪ್ರತ್ಯಕ್ಷದರ್ಶಿ ಚಂದ್ರು ಹೊನ್ನಾವರ ಮಾಹಿತಿ ನೀಡಿದ್ದು, ಟಿಪ್ಪರ್ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಅಪಘಾತ ಸಂಭವಿಸಿದೆ ಎಂದು ತಿಳಿಸಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಅಥವಾ ಗಂಭೀರ ಗಾಯಗಳಾಗಿಲ್ಲ ಎನ್ನಲಾಗಿದೆ.

ಮಾಹಿತಿ ಪಡೆದ ಬೀಳಗಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ಪೊಲೀಸರು ಮಾಹಿತಿ ಕಲೆಹಾಕಿದ್ದು, ವಾಹನದ ಸ್ಥಿತಿ ಹಾಗೂ ಚಾಲಕನ ನಿಯಂತ್ರಣ ತಪ್ಪಲು ಕಾರಣಗಳ ಬಗ್ಗೆ ಪರಿಶೀಲನೆ ಮುಂದುವರಿಸಿದ್ದಾರೆ.

ಮುಧೋಳ–ಬೀಳಗಿ ರಸ್ತೆಯಲ್ಲಿ ಭಾರೀ ವಾಹನಗಳ ಸಂಚಾರ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಇಂತಹ ಅಪಘಾತಗಳು ಮರುಕಳಿಸದಂತೆ ವಾಹನ ಚಾಲಕರು ಎಚ್ಚರಿಕೆಯಿಂದ ಸಂಚರಿಸಬೇಕು. ಅಲ್ಲದೆ, ಗರಸು ಸೇರಿದಂತೆ ನಿರ್ಮಾಣ ಸಾಮಗ್ರಿಗಳನ್ನು ಸಾಗಿಸುವ ಟಿಪ್ಪರ್ಗಳು ನಿಯಮಾನುಸಾರ ಸರಕು ತುಂಬಿಕೊಂಡು ಸುರಕ್ಷಿತವಾಗಿ ಸಂಚರಿಸುವಂತೆ ಸಂಬಂಧಿಸಿದ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande