ವರಮಹಾಲಕ್ಷ್ಮಿ ಹಬ್ಬಕ್ಕೆ ಮುಖ್ಯಮಂತ್ರಿ ಸೇರಿದಂತೆ ಗಣ್ಯರ ಶುಭಾಶಯ
ಬೆಂಗಳೂರು, 21 ಆಗಸ್ಟ್ (ಹಿ.ಸ.): ಆ್ಯಂಕರ್:ಶ್ರಾವಣ ಮಾಸದ ಪವಿತ್ರ ವರಮಹಾಲಕ್ಷ್ಮಿ ಹಬ್ಬದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಪ್ರತಿಪಕ್ಷ ನಾಯಕ ಆರ್.ಅಶೋಕ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ರಾಜ್ಯದ ಜನತೆಗೆ ಹಬ್ಬದ ಶುಭಾಶಯಗಳನ್
ಮುಖ್ಯಮಂತ್ರಿ ಎಕ್ಸ್ ಪೋಸ್ಟ್


ಬೆಂಗಳೂರು, 21 ಆಗಸ್ಟ್ (ಹಿ.ಸ.):

ಆ್ಯಂಕರ್:ಶ್ರಾವಣ ಮಾಸದ ಪವಿತ್ರ ವರಮಹಾಲಕ್ಷ್ಮಿ ಹಬ್ಬದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಪ್ರತಿಪಕ್ಷ ನಾಯಕ ಆರ್.ಅಶೋಕ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ರಾಜ್ಯದ ಜನತೆಗೆ ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ.

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಶುಭಾಶಯ ತಿಳಿಸಿ, “ನಮಸ್ತೇಸ್ತು ಮಹಾಮಾಯೇ ಶ್ರೀಪೀಠೇ ಸುರಪೂಜಿತೇ, ಶಂಖ ಚಕ್ರ ಗದಾಹಸ್ತೇ ಮಹಾಲಕ್ಷ್ಮಿ ನಮೋಸ್ತು ತೇ” ಎಂದು ಮಹಾಲಕ್ಷ್ಮಿ ದೇವಿಯನ್ನು ಸ್ಮರಿಸಿದ್ದಾರೆ. ನಾಡಿನ ಸಮಸ್ತ ಜನತೆಗೆ ವರಮಹಾಲಕ್ಷ್ಮಿ ಹಬ್ಬದ ಹಾರ್ದಿಕ ಶುಭಾಶಯಗಳನ್ನು ತಿಳಿಸಿರುವ ಅವರು, ದೇವಿಯು ಎಲ್ಲರ ಬಾಳಿನಲ್ಲಿ ಸುಖ, ಶಾಂತಿ, ನೆಮ್ಮದಿ, ಉತ್ತಮ ಆಯುಷ್ಯ, ಆರೋಗ್ಯ ಮತ್ತು ಐಶ್ವರ್ಯವನ್ನು ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ.

ಪ್ರತಿಪಕ್ಷ ನಾಯಕ ಆರ್.ಅಶೋಕ ಅವರು “ಓಂ ಶ್ರೀ ಮಹಾಲಕ್ಷ್ಮ್ಯೈ ಚ ವಿದ್ಮಹೇ, ವಿಷ್ಣು ಪತ್ನ್ಯೈ ಚ ಧೀಮಹಿ, ತನ್ನೋ ಲಕ್ಷ್ಮಿ ಪ್ರಚೋದಯಾತ್” ಎಂಬ ಮಂತ್ರದೊಂದಿಗೆ ರಾಜ್ಯದ ಜನತೆಗೆ ಶುಭಾಶಯ ಕೋರಿದ್ದಾರೆ. ತಾಯಿ ಮಹಾಲಕ್ಷ್ಮಿಯು ಸಕಲರಿಗೂ ಆಯುರಾರೋಗ್ಯ, ಸುಖ-ಶಾಂತಿ, ನೆಮ್ಮದಿ ಹಾಗೂ ಸಂಪತ್ತನ್ನು ಅನುಗ್ರಹಿಸಲಿ ಎಂದು ಹಾರೈಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ನಾಡಿನ ಸಮಸ್ತ ಭಕ್ತ ಜನತೆಗೆ ವರಮಹಾಲಕ್ಷ್ಮಿ ಹಬ್ಬದ ಭಕ್ತಿಪೂರ್ವಕ ಶುಭಾಶಯಗಳನ್ನು ತಿಳಿಸಿದ್ದಾರೆ. ಜಗನ್ಮಾತೆ ಮಹಾಲಕ್ಷ್ಮಿಯು ಎಲ್ಲರಿಗೂ ಸುಖ, ಸಮೃದ್ಧಿ, ಆರೋಗ್ಯ ಮತ್ತು ಯಶಸ್ಸನ್ನು ಕರುಣಿಸಿ, ನಾಡಿಗೆ ಮಂಗಳವನ್ನು ಉಂಟುಮಾಡಲಿ ಎಂದು ಪ್ರಾರ್ಥಿಸಿದ್ದಾರೆ.

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಕೂಡ ವರಮಹಾಲಕ್ಷ್ಮಿ ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ. ಮಹಾಲಕ್ಷ್ಮಿ ದೇವಿಯು ರೈತ ಕುಟುಂಬಗಳ ಬದುಕಿನಲ್ಲಿ ನೆಮ್ಮದಿ ತರಲಿ, ಕರುನಾಡಿನಾದ್ಯಂತ ಉತ್ತಮ ಮಳೆ-ಬೆಳೆ ಕರುಣಿಸಲಿ ಎಂದು ಆಶಿಸಿದ್ದಾರೆ. ರಾಜ್ಯ ಮತ್ತು ದೇಶವು ಶಾಂತಿ, ನೆಮ್ಮದಿ ಹಾಗೂ ಅಭಿವೃದ್ಧಿಯ ಹಾದಿಯಲ್ಲಿ ಮುನ್ನಡೆಯಲಿ ಎಂದು ಪ್ರಾರ್ಥಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande