
ಚಿಂತಾಮಣಿ, 22 ಆಗಸ್ಟ್ (ಹಿ.ಸ.):
ಆ್ಯಂಕರ್:ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಡಾ. ಬಿ.ಆರ್. ಅಂಬೇಡ್ಕರ್ ಭವನ, ಅನುಭವ ಕೇಂದ್ರ, ಭಗವಾನ್ ಬುದ್ಧರ ಪುತ್ಥಳಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಪುತ್ಥಳಿ ಹಾಗೂ ಡಿಜಿಟಲ್ ಅಧ್ಯಯನ ಕೇಂದ್ರವನ್ನು ಸಚಿವ ಈಶ್ವರ ಖಂಡ್ರೆ ಲೋಕಾರ್ಪಣೆ ಮಾಡಿದರು.
ಸುಮಾರು ₹21 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಅತ್ಯಾಧುನಿಕ ಅನುಭವ ಕೇಂದ್ರವು ಡಾ. ಬಿ.ಆರ್. ಅಂಬೇಡ್ಕರ್ ಅವರ ಚಿಂತನೆ, ಸಂವಿಧಾನದ ಮೌಲ್ಯಗಳು ಹಾಗೂ ಸಾಮಾಜಿಕ ನ್ಯಾಯದ ಸಂದೇಶವನ್ನು ಮುಂದಿನ ಪೀಳಿಗೆಗೆ ತಲುಪಿಸುವ ಮಹತ್ವದ ಕೇಂದ್ರವಾಗಲಿದೆ.
ಜ್ಞಾನ, ಸಮಾನತೆ ಮತ್ತು ಸಾಮಾಜಿಕ ನ್ಯಾಯದ ಆಶಯಗಳನ್ನು ಬಲಪಡಿಸುವ ಇಂತಹ ಜನಪರ ಯೋಜನೆಗಳು ಸರ್ಕಾರದ ಆದ್ಯತೆಯಾಗಿವೆ ಎಂದು ಸಚಿವ ಈಶ್ವರ ಖಂಡ್ರೆ ಹೇಳಿದರು.
ಹೊಸ ಕೇಂದ್ರವು ವಿದ್ಯಾರ್ಥಿಗಳು, ಯುವಜನರು ಹಾಗೂ ಸಾರ್ವಜನಿಕರಿಗೆ ಅಂಬೇಡ್ಕರ್ ಅವರ ಜೀವನ, ಹೋರಾಟ, ಚಿಂತನೆ ಮತ್ತು ಸಂವಿಧಾನ ನಿರ್ಮಾಣದ ಕುರಿತು ತಿಳಿದುಕೊಳ್ಳಲು ನೆರವಾಗಲಿದೆ. ಡಿಜಿಟಲ್ ಅಧ್ಯಯನ ಕೇಂದ್ರದ ಮೂಲಕ ಆಧುನಿಕ ತಂತ್ರಜ್ಞಾನ ಬಳಸಿ ಜ್ಞಾನವನ್ನು ವಿಸ್ತರಿಸಲು ಅವಕಾಶ ಕಲ್ಪಿಸಲಾಗಿದೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.