
ಚಿಂತಾಮಣಿ, 22 ಆಗಸ್ಟ್ (ಹಿ.ಸ.):
ಆ್ಯಂಕರ್:
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಅಭಿವೃದ್ಧಿಗೆ ಮತ್ತೊಂದು ಮಹತ್ವದ ಹೆಜ್ಜೆ ಇಡಲಾಗಿದೆ. ಚಿಂತಾಮಣಿ ತಾಲೂಕು ಪಂಚಾಯಿತಿ ಭವನದಲ್ಲಿ ನಿರ್ಮಿಸಲಾಗಿರುವ ಅತ್ಯಾಧುನಿಕ ಹವಾನಿಯಂತ್ರಿತ 300 ಆಸನಗಳ ಸಾಮರ್ಥ್ಯದ ಸೌಧ ಸಭಾಂಗಣ, 150 ಆಸನಗಳ ಸಭಾಭವನ ಹಾಗೂ ನಗರದ ಹೃದಯಭಾಗದಲ್ಲಿರುವ ಆಜಾದ್ ಚೌಕ್ ಅಭಿವೃದ್ಧಿ ಕಾಮಗಾರಿಯನ್ನು ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಆಡಳಿತಾತ್ಮಕ ಸಭೆಗಳು, ಸರ್ಕಾರಿ ಕಾರ್ಯಕ್ರಮಗಳು ಹಾಗೂ ವಿಡಿಯೋ ಸಂವಾದಗಳನ್ನು ನಡೆಸಲು ಅನುಕೂಲವಾಗುವಂತೆ ಸಭಾಂಗಣಗಳನ್ನು ನಿರ್ಮಿಸಲಾಗಿದೆ. ಈ ಸೌಲಭ್ಯಗಳು ತಾಲೂಕಿನ ಆಡಳಿತಾತ್ಮಕ ಕಾರ್ಯಗಳಿಗೆ ಮತ್ತಷ್ಟು ಬಲ ನೀಡಲಿವೆ ಎಂದರು.
ಕಾರ್ಯಕ್ರಮದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ, ಮಾಜಿ ಸಚಿವ ಹಾಗೂ ಚಿಂತಾಮಣಿ ಶಾಸಕ ಡಾ. ಎಂ.ಸಿ. ಸುಧಾಕರ್, ವಿಧಾನ ಪರಿಷತ್ ಸದಸ್ಯ ಅನೀಲ್, ಜಿಲ್ಲಾಧಿಕಾರಿ ಪ್ರಭು, ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.