ಪದವಿ ವಿದ್ಯಾರ್ಥಿನಿಯರಿಗೆ ₹30 ಸಾವಿರ ‘ದೀಪಿಕಾ ವಿದ್ಯಾರ್ಥಿವೇತನ’: ಆ.30 ಅರ್ಜಿ ಸಲ್ಲಿಕೆಗೆ ಕೊನೆಯ ದಿನ
ಬೆಂಗಳೂರು, 22 ಆಗಸ್ಟ್ (ಹಿ.ಸ.): ಆ್ಯಂಕರ್:ಕರ್ನಾಟಕ ಸರ್ಕಾರ ಹಾಗೂ ಅಜೀಮ್ ಪ್ರೇಮ್‌ಜೀ ಫೌಂಡೇಶನ್ ಜಂಟಿಯಾಗಿ ‘ದೀಪಿಕಾ ವಿದ್ಯಾರ್ಥಿವೇತನ’ ಯೋಜನೆ ಜಾರಿಗೊಳಿಸಿದ್ದು, ಸರ್ಕಾರಿ ಶಾಲೆ ಹಾಗೂ ಕಾಲೇಜುಗಳಲ್ಲಿ ವ್ಯಾಸಂಗ ಮಾಡಿ ಪ್ರಸ್ತುತ ಪದವಿ ಶಿಕ್ಷಣ ಪಡೆಯುತ್ತಿರುವ ಅರ್ಹ ವಿದ್ಯಾರ್ಥಿನಿಯರಿಗೆ ವಾರ್ಷಿಕ ₹
ಪದವಿ ವಿದ್ಯಾರ್ಥಿನಿಯರಿಗೆ ₹30 ಸಾವಿರ ‘ದೀಪಿಕಾ ವಿದ್ಯಾರ್ಥಿವೇತನ’: ಆ.30 ಅರ್ಜಿ ಸಲ್ಲಿಕೆಗೆ ಕೊನೆಯ ದಿನ


ಬೆಂಗಳೂರು, 22 ಆಗಸ್ಟ್ (ಹಿ.ಸ.):

ಆ್ಯಂಕರ್:ಕರ್ನಾಟಕ ಸರ್ಕಾರ ಹಾಗೂ ಅಜೀಮ್ ಪ್ರೇಮ್‌ಜೀ ಫೌಂಡೇಶನ್ ಜಂಟಿಯಾಗಿ ‘ದೀಪಿಕಾ ವಿದ್ಯಾರ್ಥಿವೇತನ’ ಯೋಜನೆ ಜಾರಿಗೊಳಿಸಿದ್ದು, ಸರ್ಕಾರಿ ಶಾಲೆ ಹಾಗೂ ಕಾಲೇಜುಗಳಲ್ಲಿ ವ್ಯಾಸಂಗ ಮಾಡಿ ಪ್ರಸ್ತುತ ಪದವಿ ಶಿಕ್ಷಣ ಪಡೆಯುತ್ತಿರುವ ಅರ್ಹ ವಿದ್ಯಾರ್ಥಿನಿಯರಿಗೆ ವಾರ್ಷಿಕ ₹30 ಸಾವಿರ ಆರ್ಥಿಕ ನೆರವು ನೀಡಲಾಗುವುದು.

2026-27ನೇ ಸಾಲಿನ ಯೋಜನೆಗೆ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ಅವರು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನಲ್ಲಿ ಚಾಲನೆ ನೀಡಿದ್ದಾರೆ. ಮೊದಲ ಹಂತದಲ್ಲಿ ಅಜೀಮ್ ಪ್ರೇಮ್‌ಜೀ ಫೌಂಡೇಶನ್ ಸುಮಾರು 37 ಸಾವಿರ ವಿದ್ಯಾರ್ಥಿನಿಯರಿಗೆ ನೇರವಾಗಿ ವಿದ್ಯಾರ್ಥಿವೇತನ ನೀಡಲಿದೆ. ಉಳಿದ ಅರ್ಹ ವಿದ್ಯಾರ್ಥಿನಿಯರಿಗೆ ರಾಜ್ಯ ಸರ್ಕಾರದ ಮೂಲಕ ನೆರವು ಒದಗಿಸಲಾಗುವುದು.

ಅರ್ಹತೆ: ವಿದ್ಯಾರ್ಥಿನಿಯರು 10ನೇ ತರಗತಿ ಹಾಗೂ 12ನೇ ತರಗತಿಯನ್ನು ಕಡ್ಡಾಯವಾಗಿ ಸರ್ಕಾರಿ ಶಾಲೆ ಅಥವಾ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪೂರ್ಣಗೊಳಿಸಿರಬೇಕು. ಪ್ರಸ್ತುತ ಶೈಕ್ಷಣಿಕ ಸಾಲಿನಲ್ಲಿ ಪ್ರಥಮ ವರ್ಷದ ಪದವಿ ಕೋರ್ಸ್‌ಗೆ ದಾಖಲಾಗಿರಬೇಕು. ಕನಿಷ್ಠ ಮೂರು ವರ್ಷಗಳ ಅವಧಿಯ ಬಿಎ, ಬಿಎಸ್ಸಿ, ಬಿಕಾಂ, ಬಿಇ, ಬಿಟೆಕ್ ಸೇರಿದಂತೆ ಅರ್ಹ ಪದವಿ ಹಾಗೂ ನಿಯಮಾನುಸಾರ ಅರ್ಹ ಡಿಪ್ಲೊಮಾ ಕೋರ್ಸ್‌ಗಳ ವಿದ್ಯಾರ್ಥಿನಿಯರು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಕೆಗೆ ಆ.30 ಕೊನೆಯ ದಿನವಾಗಿದ್ದು, ಅರ್ಹ ವಿದ್ಯಾರ್ಥಿನಿಯರು ಅಜೀಮ್ ಪ್ರೇಮ್‌ಜೀ ಫೌಂಡೇಶನ್‌ನ ಅಧಿಕೃತ ವಿದ್ಯಾರ್ಥಿವೇತನ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕು. ಈಗ ಅರ್ಜಿ ಸಲ್ಲಿಸಲು ಸಾಧ್ಯವಾಗದ ವಿದ್ಯಾರ್ಥಿನಿಯರಿಗೆ 2027ರ ಜನವರಿಯಲ್ಲಿ ಎರಡನೇ ಹಂತದ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸುವ ಕುರಿತು ಚಿಂತನೆ ನಡೆದಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande