ಭವಾನಿಶಂಕರ ದೇವಸ್ಥಾನದ ಪುಷ್ಕರಣಿ ಅತಿಕ್ರಮಣ ತೆರವಿಗೆ ಆಗ್ರಹಿಸಿ ಪ್ರತಿಭಟನೆ
ಹುಬ್ಬಳ್ಳಿ, 22 ಆಗಸ್ಟ್ (ಹಿ.ಸ.): ಆ್ಯಂಕರ್:ಹಳೆ ಹುಬ್ಬಳ್ಳಿಯ ಐತಿಹಾಸಿಕ ಭವಾನಿಶಂಕರ ದೇವಸ್ಥಾನದ ಪುಷ್ಕರಣಿ ಜಾಗದಲ್ಲಿ ಅತಿಕ್ರಮಣ ಮಾಡಿ ನಿರ್ಮಿಸಿರುವ ರಸ್ತೆಯನ್ನು ತೆರವುಗೊಳಿಸುವಂತೆ ಆಗ್ರಹಿಸಿ ಬೃಹತ್ ಪ್ರತಿಭಟನೆ ನಡೆಯಿತು. ಶ್ರೀ ಭವಾನಿಶಂಕರ ಹಾಗೂ ನಾರಾಯಣ ದೇವಸ್ಥಾನ ಪುಷ್ಕರಣಿ ಸಂರಕ್ಷಣಾ ಸಮಿತಿ
ಶಾಸಕ ಮಹೇಶ ಟೆಂಗಿನಕಾಯಿ


ಹುಬ್ಬಳ್ಳಿ, 22 ಆಗಸ್ಟ್ (ಹಿ.ಸ.):

ಆ್ಯಂಕರ್:ಹಳೆ ಹುಬ್ಬಳ್ಳಿಯ ಐತಿಹಾಸಿಕ ಭವಾನಿಶಂಕರ ದೇವಸ್ಥಾನದ ಪುಷ್ಕರಣಿ ಜಾಗದಲ್ಲಿ ಅತಿಕ್ರಮಣ ಮಾಡಿ ನಿರ್ಮಿಸಿರುವ ರಸ್ತೆಯನ್ನು ತೆರವುಗೊಳಿಸುವಂತೆ ಆಗ್ರಹಿಸಿ ಬೃಹತ್ ಪ್ರತಿಭಟನೆ ನಡೆಯಿತು.

ಶ್ರೀ ಭವಾನಿಶಂಕರ ಹಾಗೂ ನಾರಾಯಣ ದೇವಸ್ಥಾನ ಪುಷ್ಕರಣಿ ಸಂರಕ್ಷಣಾ ಸಮಿತಿ ವತಿಯಿಂದ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಶಾಸಕ ಮಹೇಶ ಟೆಂಗಿನಕಾಯಿ ಭಾಗವಹಿಸಿ ಬೆಂಬಲ ವ್ಯಕ್ತಪಡಿಸಿದರು. ಪುಷ್ಕರಣಿ ಜಾಗದ ಮೇಲಿನ ಅತಿಕ್ರಮಣವನ್ನು ಕೂಡಲೇ ತೆರವುಗೊಳಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಪುರಾತತ್ವ ಇಲಾಖೆ ಪುಷ್ಕರಣಿ ಸ್ಥಳದಲ್ಲಿ ಉತ್ಖನನ ನಡೆಸಿ, ಐತಿಹಾಸಿಕ ದೇವಸ್ಥಾನದ ಪಾವಿತ್ರ್ಯ ಹಾಗೂ ಮೂಲ ಸ್ವರೂಪವನ್ನು ಸಂರಕ್ಷಿಸಬೇಕು ಎಂದು ಆಗ್ರಹಿಸಲಾಯಿತು. ಬೇಡಿಕೆಗಳನ್ನು ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಲಾಯಿತು.

ಪ್ರತಿಭಟನೆಯಲ್ಲಿ ಶಾಸಕರಾದ ಅರವಿಂದ ಬೆಲ್ಲದ, ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ, ಪುಷ್ಕರಣಿ ಸಂರಕ್ಷಣಾ ಸಮಿತಿ ಸಂಚಾಲಕ ಸುಧಾಕರ ಶೆಟ್ಟಿ, ಶ್ರೀರಾಮಸೇನೆಯ ಮುಖ್ಯಸ್ಥ ಪ್ರಮೋದ ಮುತಾಲಿಕ ಸೇರಿದಂತೆ ಪ್ರಮುಖರು ಹಾಗೂ ಸಹಸ್ರಾರು ಮಂದಿ ಹಿಂದೂ ಬಾಂಧವರು ಭಾಗವಹಿಸಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande