
ಬಾಗಲಕೋಟೆ, 22 ಆಗಸ್ಟ್ (ಹಿ.ಸ.)
ಆ್ಯಂಕರ್ : ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರ ಶೌರ್ಯ, ಸಾಹಸ, ದೇಶಭಕ್ತಿ ಹಾಗೂ ಸ್ವಾಭಿಮಾನದ ಹೋರಾಟವನ್ನು ಸ್ಮರಿಸುವ ಉದ್ದೇಶದಿಂದ ವಿಜಯಪುರದಲ್ಲಿ ಆಗಸ್ಟ್ 23ರಂದು ಸಂಗೊಳ್ಳಿ ರಾಯಣ್ಣ ಜಾತ್ರೆ–2026 ಅನ್ನು ಭವ್ಯವಾಗಿ ಆಯೋಜಿಸಲಾಗಿದೆ.
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರು ದೇಶದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಡಿದ ಅಪ್ರತಿಮ ವೀರರಾಗಿದ್ದು, ಅವರ ತ್ಯಾಗ, ಧೈರ್ಯ ಮತ್ತು ದೇಶಪ್ರೇಮ ಇಂದಿನ ಯುವಜನತೆಗೆ ಸದಾ ಪ್ರೇರಣೆಯಾಗಿದೆ. ಅವರ ಆದರ್ಶಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಹಾಗೂ ಸಮಾಜದಲ್ಲಿ ದೇಶಭಕ್ತಿ, ಏಕತೆ ಮತ್ತು ಸಂಘಟನಾ ಮನೋಭಾವ ಬೆಳೆಸುವ ಉದ್ದೇಶದಿಂದ ಜಾತ್ರೆಯನ್ನು ಆಯೋಜಿಸಲಾಗಿದೆ.
ಜಾತ್ರೆಯಲ್ಲಿ ಸಂಗೊಳ್ಳಿ ರಾಯಣ್ಣರ ಜೀವನ, ಹೋರಾಟ ಮತ್ತು ದೇಶಕ್ಕಾಗಿ ಅವರು ಮಾಡಿದ ತ್ಯಾಗವನ್ನು ಸ್ಮರಿಸುವ ವಿವಿಧ ಕಾರ್ಯಕ್ರಮಗಳು ನಡೆಯಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಬೀಳಗಿ ಪಟ್ಟಣದ
ರಾಜಕೀಯ ಮುಖಂಡ ಯಲ್ಲಪ್ಪ ಹೆಗಡೆ ಮಾತನಾಡಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರ ಶೌರ್ಯ, ಸಾಹಸ ಹಾಗೂ ದೇಶಭಕ್ತಿ ಪ್ರತಿಯೊಬ್ಬರಿಗೂ ಸ್ಫೂರ್ತಿಯಾಗಿದೆ. ಅವರ ಆದರ್ಶಗಳನ್ನು ಸ್ಮರಿಸುವ ಜಾತ್ರೆಯಲ್ಲಿ ಸಾರ್ವಜನಿಕರು ಕುಟುಂಬದವರು, ಸ್ನೇಹಿತರು ಹಾಗೂ ಬಂಧುಗಳೊಂದಿಗೆ ಆಗಮಿಸಿ ಕಾರ್ಯಕ್ರಮದ ಯಶಸ್ಸಿಗೆ ಸಾಕ್ಷಿಯಾಗಬೇಕು ಎಂದು ಕರೆ ನೀಡಿದರು.
ಆಗಸ್ಟ್ 23ರಂದು ವಿಜಯಪುರದಲ್ಲಿ ನಡೆಯಲಿರುವ ಈ ಭವ್ಯ ಜಾತ್ರೆಗೆ ಎಲ್ಲರೂ ಆಗಮಿಸಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರ ಆದರ್ಶಗಳಿಗೆ ಗೌರವ ಸಲ್ಲಿಸಬೇಕು. ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ರಾಯಣ್ಣರ ದೇಶಭಕ್ತಿ ಮತ್ತು ಹೋರಾಟದ ಸಂದೇಶವನ್ನು ಸಮಾಜದಲ್ಲಿ ಮತ್ತಷ್ಟು ಬಲಪಡಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande