
ಧಾರವಾಡ, 22 ಆಗಸ್ಟ್ (ಹಿ.ಸ.):
ಆ್ಯಂಕರ್:ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಮಾಹಿತಿ-ಶಿಕ್ಷಣ-ಸಂವಹನ ವಿಭಾಗ ಹಾಗೂ ಕರ್ನಾಟಕ ಮಹಾವಿದ್ಯಾಲಯ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ಆ.24ರಂದು ಅಂತಾರಾಷ್ಟ್ರೀಯ ಯುವದಿನಾಚರಣೆ ಹಾಗೂ ಎಚ್ಐವಿ/ಏಡ್ಸ್ ಅರಿವು ಮಾಸಾಚರಣೆ-2026 ಕಾರ್ಯಕ್ರಮ ಆಯೋಜಿಸಲಾಗಿದೆ.
ಕರ್ನಾಟಕ ಮಹಾವಿದ್ಯಾಲಯದಲ್ಲಿ ಬೆಳಗ್ಗೆ 10.30ಕ್ಕೆ ನಡೆಯುವ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಉದ್ಘಾಟಿಸಲಿದ್ದು, ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಐ.ಸಿ. ಮುಳಗುಂದ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಪರಶುರಾಮ ಎಫ್.ಕೆ. ಮುಖ್ಯ ಅತಿಥಿಯಾಗಿ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಸಂಗಪ್ಪ ಗಾಬಿ ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ.
ವಿವಿಧ ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮಾಧಿಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಕಿಮ್ಸ್‌ನ ಸಹಾಯಕ ಪ್ರಾಧ್ಯಾಪಕ ಡಾ. ಬಾಲಕೃಷ್ಣ ಟೆಲಿ ವಿಶೇಷ ಉಪನ್ಯಾಸ ನೀಡಲಿದ್ದಾರೆ.
ಜಿಲ್ಲಾ ಕ್ಷಯರೋಗ ನಿರ್ಮೂಲನಾ ಹಾಗೂ ಏಡ್ಸ್ ನಿಯಂತ್ರಣಾಧಿಕಾರಿ ಡಾ. ರವೀಂದ್ರ ಆರ್. ಬೋವೇರ ಪ್ರಾಸ್ತಾವಿಕ ಮಾತನಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.