
ಬಾಗಲಕೋಟೆ, 22 ಆಗಸ್ಟ್ (ಹಿ.ಸ.)
ಆ್ಯಂಕರ್ : ಎದುರಿದ್ದ ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಯತ್ನಿಸಿದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಟ್ರ್ಯಾಕ್ಟರ್ವೊಂದು ಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮ, ಡಿವೈಡರ್ ಮೇಲ್ಭಾಗದಲ್ಲಿದ್ದ ಕಬ್ಬಿಣದ ಸರಳು ಮುರಿದು ಬಿದ್ದ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದ ಶಿವಾಜಿ ವೃತ್ತದಲ್ಲಿ ನಡೆದಿದೆ.
ಘಟನೆಯಿಂದ ಕೆಲಕಾಲ ಸ್ಥಳದಲ್ಲಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿ, ವಾಹನ ಸವಾರರು ಪರದಾಡುವಂತಾಯಿತು. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.
ಪ್ರತ್ಯಕ್ಷದರ್ಶಿ ವೀರೇಶ ಕಮ್ಮಾರ ಅವರ ಮಾಹಿತಿ ಪ್ರಕಾರ, ಟ್ರ್ಯಾಕ್ಟರ್ವೊಂದು ಶಿವಾಜಿ ವೃತ್ತದ ಮೂಲಕ ಸಾಗುತ್ತಿದ್ದ ಸಂದರ್ಭದಲ್ಲಿ ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಚಾಲಕ ಏಕಾಏಕಿ ಟ್ರ್ಯಾಕ್ಟರ್ನ್ನು ನಿಯಂತ್ರಿಸಲು ಪ್ರಯತ್ನಿಸಿದ್ದಾರೆ. ಈ ವೇಳೆ ಟ್ರ್ಯಾಕ್ಟರ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಮಧ್ಯದ ಡಿವೈಡರ್ಗೆ ಡಿಕ್ಕಿ ಹೊಡೆದಿದೆ.
ಟ್ರ್ಯಾಕ್ಟರ್ ಡಿಕ್ಕಿಯ ರಭಸಕ್ಕೆ ಡಿವೈಡರ್ ಮೇಲಿದ್ದ ಕಬ್ಬಿಣದ ಸರಳು ಮುರಿದು ರಸ್ತೆಗೆ ಬಿದ್ದಿದೆ. ಘಟನೆಯಿಂದ ಕೆಲಕಾಲ ವಾಹನಗಳ ಸಂಚಾರ ನಿಧಾನಗೊಂಡು, ರಸ್ತೆಯಲ್ಲಿ ಸಂಚರಿಸುತ್ತಿದ್ದ ವಾಹನ ಸವಾರರು ಎಚ್ಚರಿಕೆಯಿಂದ ವಾಹನ ಚಲಾಯಿಸುವ ಪರಿಸ್ಥಿತಿ ನಿರ್ಮಾಣವಾಯಿತು.
ಸ್ಥಳೀಯರು ಕೂಡಲೇ ಮುರಿದು ಬಿದ್ದ ಕಬ್ಬಿಣದ ಸರಳನ್ನು ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುಕೂಲ ಕಲ್ಪಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಶಿವಾಜಿ ವೃತ್ತದಂತಹ ವಾಹನ ಸಂಚಾರ ಹೆಚ್ಚಿರುವ ಪ್ರದೇಶದಲ್ಲಿ ಡಿವೈಡರ್ ಹಾಗೂ ಅದರ ಮೇಲಿರುವ ಕಬ್ಬಿಣದ ರಚನೆಗಳ ಸುರಕ್ಷತೆಯನ್ನು ಪರಿಶೀಲಿಸಿ, ಹಾನಿಗೊಳಗಾದ ಭಾಗಗಳನ್ನು ತ್ವರಿತವಾಗಿ ದುರಸ್ತಿಪಡಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ
---------------
ಹಿಂದೂಸ್ತಾನ್ ಸಮಾಚಾರ್ / jyothi deshpande