
ಕಂಪ್ಲಿ, 22 ಆಗಸ್ಟ್ (ಹಿ.ಸ.):
ಆ್ಯಂಕರ್ :ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕಂಪ್ಲಿ ಪಟ್ಟಣದ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿಗಳ ವಾಸಕ್ಕೆ ಬಾಡಿಗೆ ಕಟ್ಟಡ ಬೇಕಾಗಿದ್ದು, ಆಸಕ್ತ ಮಾಲೀಕರು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ವಸತಿ ನಿಲಯದ ಕಟ್ಟಡವು ತುಂಬಾ ಹಳೆಯದಾಗಿದ್ದು, ವಿದ್ಯಾರ್ಥಿ ನಿಲಯದಲ್ಲಿನ ವಿದ್ಯಾರ್ಥಿಗಳ ಆರೋಗ್ಯ ಮತ್ತು ಶೈಕ್ಷಣಿಕ ಹಿತದೃಷ್ಟಿಯಿಂದ 150 ವಿದ್ಯಾರ್ಥಿಗಳ ವಾಸಕ್ಕೆ ಅನುಕೂಲಕರವಾಗಿರುವ ಬಾಡಿಗೆ ಕಟ್ಟಡದ ಅವಶ್ಯವಿದ್ದು, ಕಟ್ಟಡ ಒದಗಿಸಲು ಆಸಕ್ತ ಹೊಂದಿರುವ ಮಾಲೀಕರು ಕಟ್ಟಡದ ಸೂಕ್ತ ದಾಖಲಾತಿಗಳೊಂದಿಗೆ ಸಹಾಯಕ ನಿರ್ದೇಶಕರು (ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಬಳ್ಳಾರಿ, ಇವರ ಕಚೇರಿಗೆ ಭೇಟಿ ನೀಡಿ ಆಗಸ್ಟ್ 24 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿ ಸಮಾಜ ಕಲ್ಯಾಣ ಇಲಾಖೆ ಕಚೇರಿ ಅಥವಾ ಮೊ.9845596262 ಗೆ ಕರೆ ಮಾಡಿ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್