
ಶಿವಮೊಗ್ಗ, 22 ಆಗಸ್ಟ್ (ಹಿ.ಸ.):
ಆ್ಯಂಕರ್:
ರಾಜ್ಯ ಸರ್ಕಾರದ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪ ಯೋಜನೆಯಡಿ ಅರ್ಹ ಉದ್ಯಮಿಗಳಿಗೆ ವಿವಿಧ ಸೌಲಭ್ಯ ಕಲ್ಪಿಸಲು ಅರ್ಜಿ ಆಹ್ವಾನಿಸಲಾಗಿದೆ.
ಸಾಫ್ಟ್ ಸೀಡ್ ಕ್ಯಾಪಿ0ರ:ಷ್ಟು ಸಹಾಯಧನ, ಸಾಲ ಶುಲ್ಕ ಮರುಪಾವತಿ ಹಾಗೂ ವಿದ್ಯುಚ್ಛಕ್ತಿ ಸಹಾಯಧನ ಯೋಜನೆಗಳಡಿ ಅರ್ಹರಿಗೆ ನೆರವು ನೀಡಲಾಗುವುದು.
ಈಗಾಗಲೇ ಬ್ಯಾಂಕ್ ಸಾಲ ಪಡೆದು ಉದ್ಯಮ ಸ್ಥಾಪಿಸಿರುವ ಅರ್ಹ ಉದ್ಯಮಿಗಳು ಹಾಗೂ ಬ್ಯಾಂಕ್ ಸಾಲದ ಮೂಲಕ ಹೊಸ ಉದ್ಯಮ ಸ್ಥಾಪಿಸಲು ಇಚ್ಛಿಸುವವರು ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ನೆಹರೂ ರಸ್ತೆಯಲ್ಲಿರುವ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.