ಆ.25ರಂದು ತೋಟಗಾರಿಕೆ ಬೆಳೆಗಳ ಬರ ನಿರ್ವಹಣೆ ಕುರಿತು ರೈತರೊಂದಿಗೆ ವಿಡಿಯೊ ಸಂವಾದ
ಧಾರವಾಡ, 22 ಆಗಸ್ಟ್ (ಹಿ.ಸ.): ಆ್ಯಂಕರ್: ಧಾರವಾಡ ಜಿಲ್ಲೆಯ ರೈತರಿಗೆ ತೋಟಗಾರಿಕೆ ಬೆಳೆಗಳ ಬರ ನಿರ್ವಹಣೆ ಕುರಿತು ಮಾಹಿತಿ ಮತ್ತು ಮಾರ್ಗದರ್ಶನ ನೀಡಲು ತೋಟಗಾರಿಕೆ ಇಲಾಖೆ ವತಿಯಿಂದ ಆ.25ರಂದು ಬೆಳಗ್ಗೆ 10.30ಕ್ಕೆ ವಿಡಿಯೊ ಸಂವಾದ ಸಭೆ ಆಯೋಜಿಸಲಾಗಿದೆ. ಬರ ಪರಿಸ್ಥಿತಿಯಲ್ಲಿ ತೋಟಗಾರಿಕೆ ಬೆಳೆಗಳನ್ನು
ಆ.25ರಂದು ತೋಟಗಾರಿಕೆ ಬೆಳೆಗಳ ಬರ ನಿರ್ವಹಣೆ ಕುರಿತು ರೈತರೊಂದಿಗೆ ವಿಡಿಯೊ ಸಂವಾದ


ಧಾರವಾಡ, 22 ಆಗಸ್ಟ್ (ಹಿ.ಸ.):

ಆ್ಯಂಕರ್:

ಧಾರವಾಡ ಜಿಲ್ಲೆಯ ರೈತರಿಗೆ ತೋಟಗಾರಿಕೆ ಬೆಳೆಗಳ ಬರ ನಿರ್ವಹಣೆ ಕುರಿತು ಮಾಹಿತಿ ಮತ್ತು ಮಾರ್ಗದರ್ಶನ ನೀಡಲು ತೋಟಗಾರಿಕೆ ಇಲಾಖೆ ವತಿಯಿಂದ ಆ.25ರಂದು ಬೆಳಗ್ಗೆ 10.30ಕ್ಕೆ ವಿಡಿಯೊ ಸಂವಾದ ಸಭೆ ಆಯೋಜಿಸಲಾಗಿದೆ.

ಬರ ಪರಿಸ್ಥಿತಿಯಲ್ಲಿ ತೋಟಗಾರಿಕೆ ಬೆಳೆಗಳನ್ನು ಸಂರಕ್ಷಿಸುವುದು, ನೀರಿನ ಸಮರ್ಪಕ ಬಳಕೆ ಹಾಗೂ ಬೆಳೆ ನಿರ್ವಹಣೆ ಕುರಿತು ರೈತರಿಗೆ ಅಗತ್ಯ ಮಾಹಿತಿ ನೀಡಲಾಗುವುದು.

ಜಿಲ್ಲೆಯ ಎಲ್ಲ ರೈತರು ಸಭೆಯಲ್ಲಿ ಭಾಗವಹಿಸಿ ಇಲಾಖೆಯ ತಜ್ಞರಿಂದ ಮಾಹಿತಿ ಪಡೆದು ಇದರ ಸದುಪಯೋಗ ಪಡೆಯುವಂತೆ ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande