
ಬೆಂಗಳೂರು, 22 ಆಗಸ್ಟ್ (ಹಿ.ಸ.):
ಆ್ಯಂಕರ್:
ಕೇಂದ್ರ ಸರ್ಕಾರದ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಒಂದಾದ ಬೆಂಗಳೂರಿನ ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಕೇಂದ್ರ ಸರ್ಕಾರದ ಹುದ್ದೆಗಳನ್ನು ಎದುರುನೋಡುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ಇದೊಂದು ಸುವರ್ಣಾವಕಾಶವಾಗಿದ್ದು, ಆಸಕ್ತರು ಇ-ಮೇಲ್ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ಸಂಸ್ಥೆಯಲ್ಲಿ ಖಾಲಿ ಇರುವ 01 ಎಆರ್ ಎಫ್ ಇನ್ಸ್ಟ್ರುಮೆಂಟ್ ಸೈಂಟಿಸ್ಟ್ ಹುದ್ದೆಗೆ ಆನ್ಲೈನ್ (ಇ-ಮೇಲ್) ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಬೆಂಗಳೂರಿನಲ್ಲೇ ಕಾರ್ಯನಿರ್ವಹಿಸಲಿರುವ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಆಗಸ್ಟ್ 31, 2026 ಆಗಿದೆ.
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಪಿಎಚ್.ಡಿ ಪದವಿ ಪಡೆದಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 45 ವರ್ಷಗಳ ವಯೋಮಿತಿ ನಿಗದಿಪಡಿಸಲಾಗಿದೆ.ಈ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಆಕರ್ಷಕ ವೇತನ ಪ್ಯಾಕೇಜ್ ಲಭ್ಯವಿದ್ದು, ನೇಮಕಾತಿ ಹೊಂದಿದವರಿಗೆ ವರ್ಷಕ್ಕೆ 65 ಲಕ್ಷ ರೂಪಾಯಿಗಳವರೆಗೆ ವೇತನ ದೊರೆಯಲಿದೆ.
ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಮತ್ತು ಅರ್ಜಿ ಸಲ್ಲಿಸಲು JNCASR ಸಂಸ್ಥೆಯ ಅಧಿಕೃತ ವೆಬ್ಸೈಟ್ ಅಥವಾ ಅಧಿಸೂಚನೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R