ಪ್ರಧಾನಿ ಮೋದಿ ಜನ್ಮದಿನದ ಅಂಗವಾಗಿ ಬಿಜೆಪಿಯಿಂದ ತಿಂಗಳ ಕಾಲ ಸೇವಾ ಸಂಕಲ್ಪ ಅಭಿಯಾನ
ನವದೆಹಲಿ, 22 ಆಗಸ್ಟ್ (ಹಿ.ಸ.): ಆ್ಯಂಕರ್: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಬಿಜೆಪಿ ದೇಶಾದ್ಯಂತ ಒಂದು ತಿಂಗಳ ಕಾಲ ‘ಸೇವಾ ಸಂಕಲ್ಪ ಅಭಿಯಾನ’ ಹಮ್ಮಿಕೊಳ್ಳಲು ನಿರ್ಧರಿಸಿದೆ. ಸೆಪ್ಟೆಂಬರ್ 17ರಿಂದ ನಡೆಯಲಿರುವ ಅಭಿಯಾನದಡಿ ಸೇವಾ ಪಖ್ವಾಡಾ, ‘ಸೇವೆಯಲ್ಲಿ ನನ್ನ ಕೊಡುಗೆ’, ‘ಸೇವಾ ಸೇತು
भाजपा के महामंत्री विनोद तावड़े


ನವದೆಹಲಿ, 22 ಆಗಸ್ಟ್ (ಹಿ.ಸ.):

ಆ್ಯಂಕರ್:

ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಬಿಜೆಪಿ ದೇಶಾದ್ಯಂತ ಒಂದು ತಿಂಗಳ ಕಾಲ ‘ಸೇವಾ ಸಂಕಲ್ಪ ಅಭಿಯಾನ’ ಹಮ್ಮಿಕೊಳ್ಳಲು ನಿರ್ಧರಿಸಿದೆ.

ಸೆಪ್ಟೆಂಬರ್ 17ರಿಂದ ನಡೆಯಲಿರುವ ಅಭಿಯಾನದಡಿ ಸೇವಾ ಪಖ್ವಾಡಾ, ‘ಸೇವೆಯಲ್ಲಿ ನನ್ನ ಕೊಡುಗೆ’, ‘ಸೇವಾ ಸೇತು ಅಭಿಯಾನ’ ಹಾಗೂ ರಾಷ್ಟ್ರೀಯ ನವೋದ್ಯಮ ಸವಾಲು ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ರಾಜ್ಯದಿಂದ ಬೂತ್ ಮಟ್ಟದವರೆಗೆ ಆಯೋಜಿಸಲಾಗುವುದು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಸಂಸದ ವಿನೋದ್ ತಾವಡೆ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು.

ಈ ವರ್ಷ ಅಕ್ಟೋಬರ್ 7ರಂದು ಪ್ರಧಾನಿ ಮೋದಿ ಅವರು ಗುಜರಾತ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿ 25 ವರ್ಷ ಪೂರ್ಣಗೊಳ್ಳಲಿರುವ ಹಿನ್ನೆಲೆಯಲ್ಲಿ ಎರಡೂ ಸಂದರ್ಭಗಳನ್ನು ಗಮನದಲ್ಲಿಟ್ಟುಕೊಂಡು ಈ ಬಾರಿ ತಿಂಗಳ ಅವಧಿಯ ಅಭಿಯಾನ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.

ಅಭಿಯಾನದಡಿ ದೇಶದ 14 ಲಕ್ಷಕ್ಕೂ ಅಧಿಕ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ, ಸಮಾಜ ಸೇವೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರನ್ನು ಸನ್ಮಾನಿಸಲಾಗುವುದು. ‘ಸೇವೆಯಲ್ಲಿ ನನ್ನ ಕೊಡುಗೆ’ ಕಾರ್ಯಕ್ರಮದಡಿ ಸ್ವಚ್ಛತೆ, ಕ್ಷಯರೋಗ ನಿರ್ಮೂಲನೆ ಸೇರಿದಂತೆ ವಿವಿಧ ಸೇವಾ ಕಾರ್ಯಗಳಲ್ಲಿ ಪಾಲ್ಗೊಳ್ಳುವಂತೆ ಯುವಕರು ಹಾಗೂ ಸಾರ್ವಜನಿಕರನ್ನು ಪ್ರೇರೇಪಿಸಲಾಗುವುದು.

‘ಸೇವಾ ಸೇತು ಅಭಿಯಾನ’ದ ಮೂಲಕ ಸರ್ಕಾರಿ ಯೋಜನೆಗಳಿಂದ ವಂಚಿತರಾಗಿರುವ ಅರ್ಹರನ್ನು ಗುರುತಿಸಿ, ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸುವ ಮೂಲಕ ಯೋಜನೆಗಳ ಸೌಲಭ್ಯ ದೊರಕಿಸಲು ನೆರವು ನೀಡಲಾಗುವುದು.

ಇದರೊಂದಿಗೆ ಯುವಕರ ಸಂಶೋಧನೆ ಹಾಗೂ ನವೀನ ಆಲೋಚನೆಗಳಿಗೆ ಉತ್ತೇಜನ ನೀಡಲು ರಾಷ್ಟ್ರೀಯ ನವೋದ್ಯಮ ಸವಾಲು ಆಯೋಜಿಸಲಾಗುವುದು. ಬೂತ್, ಬ್ಲಾಕ್, ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ಸ್ಪರ್ಧೆಗಳು ನಡೆಯಲಿವೆ. ಅಭಿಯಾನದ ಅನುಷ್ಠಾನಕ್ಕಾಗಿ ಮುಂದಿನ ಒಂದು ವಾರದಲ್ಲಿ ರಾಜ್ಯ, ಜಿಲ್ಲಾ ಮತ್ತು ಬ್ಲಾಕ್ ಮಟ್ಟದಲ್ಲಿ ಕಾರ್ಯಾಗಾರಗಳನ್ನು ನಡೆಸಲಾಗುವುದು ಎಂದು ತಾವಡೆ ತಿಳಿಸಿದರು.

--------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande