ಸಕ್ಕರೆ ಬೆಲೆ ಏರಿಕೆ ಕುರಿತು ಕೇಂದ್ರ ಸರ್ಕಾರದ ವಿರುದ್ಧ ಖರ್ಗೆ ವಾಗ್ದಾಳಿ
ನವದೆಹಲಿ, 22 ಆಗಸ್ಟ್ (ಹಿ.ಸ.): ಆ್ಯಂಕರ್:ಹಬ್ಬಗಳಿಗೂ ಮುನ್ನ ಸಕ್ಕರೆ ಬೆಲೆಯಲ್ಲಿ ಏರಿಕೆಯಾಗಿರುವುದನ್ನು ಪ್ರಶ್ನಿಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೇಂದ್ರದ ನರೇಂದ್ರ ಮೋದಿ ಸರ್ಕಾರದ ನೀತಿಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ
ಖರ್ಗೆ ಎಕ್ಸ್ ಪೋಸ್ಟ್


ನವದೆಹಲಿ, 22 ಆಗಸ್ಟ್ (ಹಿ.ಸ.):

ಆ್ಯಂಕರ್:ಹಬ್ಬಗಳಿಗೂ ಮುನ್ನ ಸಕ್ಕರೆ ಬೆಲೆಯಲ್ಲಿ ಏರಿಕೆಯಾಗಿರುವುದನ್ನು ಪ್ರಶ್ನಿಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೇಂದ್ರದ ನರೇಂದ್ರ ಮೋದಿ ಸರ್ಕಾರದ ನೀತಿಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಖರ್ಗೆ, ಭಾರತ ವಿಶ್ವದ ಪ್ರಮುಖ ಸಕ್ಕರೆ ಉತ್ಪಾದಕ ಮತ್ತು ರಫ್ತುದಾರ ರಾಷ್ಟ್ರವಾಗಿದ್ದರೂ, ದೇಶದಲ್ಲಿ ಸಕ್ಕರೆ ದಾಸ್ತಾನು ಒಂಬತ್ತು ವರ್ಷಗಳ ಕನಿಷ್ಠ ಮಟ್ಟಕ್ಕೆ ತಲುಪಿರುವುದು ಏಕೆ ಎಂದು ಪ್ರಶ್ನಿಸಿದ್ದಾರೆ. ಸಕ್ಕರೆ ರಫ್ತಿಗೆ ನಿರ್ಬಂಧ ವಿಧಿಸುವ ಪರಿಸ್ಥಿತಿ ಹಾಗೂ 10 ಲಕ್ಷ ಟನ್ ಸಕ್ಕರೆಯನ್ನು ಸುಂಕಮುಕ್ತವಾಗಿ ಆಮದು ಮಾಡಿಕೊಳ್ಳುವ ಅಗತ್ಯ ಹೇಗೆ ಎದುರಾಯಿತು ಎಂದು ಅವರು ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ಕಳೆದ ಮೂರು ತಿಂಗಳಲ್ಲಿ ಸಕ್ಕರೆ ಬೆಲೆ ಸುಮಾರು ಶೇ.40ರಷ್ಟು ಏರಿಕೆಯಾಗಿದೆ ಎಂದು ಹೇಳಿರುವ ಖರ್ಗೆ, ಹಬ್ಬಗಳ ಸಂದರ್ಭದಲ್ಲಿ ಜನರ ಮೇಲೆ ಬಿದ್ದಿರುವ ಈ ಬೆಲೆ ಏರಿಕೆಯ ಹೊಣೆಯನ್ನು ಯಾರು ಹೊರುತ್ತಾರೆ ಎಂದು ಪ್ರಶ್ನಿಸಿದ್ದಾರೆ.

ದೇಶದಲ್ಲಿ ಸಕ್ಕರೆ ಕೊರತೆ ಎದುರಾಗಿರುವಾಗ ವಿದೇಶದಿಂದ ಸಕ್ಕರೆ ಆಮದು ಮಾಡಿಕೊಳ್ಳಲಾಗುತ್ತಿದೆ. ಮತ್ತೊಂದೆಡೆ ಕಬ್ಬು ಹಾಗೂ ಧಾನ್ಯಗಳನ್ನು ಇ20 ಇಂಧನಕ್ಕಾಗಿ ಎಥನಾಲ್ ಉತ್ಪಾದನೆಗೆ ಬಳಸಲಾಗುತ್ತಿದೆ. ಇಂತಹ ನೀತಿಯನ್ನು ಕೇಂದ್ರ ಸರ್ಕಾರ ಏಕೆ ಮರುಪರಿಶೀಲಿಸುತ್ತಿಲ್ಲ ಎಂದು ಅವರು ಪ್ರಶ್ನಿಸಿದ್ದಾರೆ.

‘ಇದು ಯಾವ ರೀತಿಯ ಆತ್ಮನಿರ್ಭರ ಭಾರತ?’ ಎಂದು ಪ್ರಶ್ನಿಸಿರುವ ಖರ್ಗೆ, ಮೊದಲು ಸಕ್ಕರೆ ಉತ್ಪಾದನೆ ಕುಸಿಯಿತು, ಬಳಿಕ ದಾಸ್ತಾನು ಒಂಬತ್ತು ವರ್ಷಗಳ ಕನಿಷ್ಠ ಮಟ್ಟಕ್ಕೆ ತಲುಪಿತು. ಈಗ ವಿದೇಶದಿಂದ ಸಕ್ಕರೆ ಆಮದು ಮಾಡಿಕೊಳ್ಳಲಾಗುತ್ತಿದೆ. ಮತ್ತೊಂದೆಡೆ ಕಬ್ಬನ್ನು ಪೆಟ್ರೋಲ್‌ಗೆ ಮಿಶ್ರಣ ಮಾಡುವ ಎಥನಾಲ್ ಉತ್ಪಾದನೆಗೆ ಬಳಸಲಾಗುತ್ತಿದೆ ಎಂದು ಟೀಕಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande