ಉದ್ಯಮಿ ಗೌತಮ ಅದಾನಿ-ಡಿ.ಕೆ. ಶಿವಕುಮಾರ್ ಭೇಟಿ
ಸೌಜನ್ಯದ ಮಾತುಕತೆ ಎಂದ ಮೂಲಗಳು
ADANI-DKSHIVAKUMAR-MEETING


ಬೆಂಗಳೂರು, 23 ಆಗಸ್ಟ್ (ಹಿ.ಸ.)

ಆ್ಯಂಕರ್:

ಅದಾನಿ ಗ್ರೂಪ್ಸ್ನ ಅಧ್ಯಕ್ಷ ಗೌತಮ್ ಅದಾನಿ ಅವರು ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಬೆಂಗಳೂರಿನ ಸದಾಶಿವನಗರದಲ್ಲಿರುವ ಅವರ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಆರ್ಟ್ ಆಫ್ ಲಿವಿಂಗ್ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಬೆಂಗಳೂರಿಗೆ ಆಗಮಿಸಿದ್ದ ಗೌತಮ್ ಅದಾನಿ, ಕಾರ್ಯಕ್ರಮ ಮುಗಿಸಿ ವಿಮಾನ ನಿಲ್ದಾಣಕ್ಕೆ ತೆರಳುವ ಮಾರ್ಗದಲ್ಲಿ ಡಿ.ಕೆ. ಶಿವಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿದರು. ಈ ವೇಳೆ ಇಬ್ಬರೂ ಗಣ್ಯರು ಕೆಲಕಾಲ ಪರಸ್ಪರ ಚರ್ಚೆ ನಡೆಸಿದರು.

ಈ ಭೇಟಿಯ ಸಂದರ್ಭದಲ್ಲಿ ರಾಜ್ಯದ ವಿವಿಧ ಅಭಿವೃದ್ಧಿ ಹಾಗೂ ಕೈಗಾರಿಕಾ ವಿಚಾರಗಳ ಕುರಿತು ಚರ್ಚೆ ನಡೆದಿರುವ ಸಾಧ್ಯತೆಯಿದೆ ಎಂಬ ಬಗ್ಗೆ ರಾಜಕೀಯ ಹಾಗೂ ಉದ್ಯಮ ವಲಯದಲ್ಲಿ ವ್ಯಾಪಕ ಕುತೂಹಲ ಮೂಡಿದೆ. ಆದಾಗ್ಯೂ, ಇದು ಕೇವಲ ಸೌಜನ್ಯದ ಭೇಟಿಯಾಗಿತ್ತು ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ಸ್ಪಷ್ಟಪಡಿಸಿವೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande