ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಧನಸಹಾಯ: ಅರ್ಜಿ ಸಲ್ಲಿಕೆ ಅವಧಿ ಸೆಪ್ಟೆಂಬರ್ 4 ರವರೆಗೆ ವಿಸ್ತರಣೆ
ಬಳ್ಳಾರಿ, 23 ಆಗಸ್ಟ್ (ಹಿ.ಸ.) ಆ್ಯಂಕರ್ : ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ 2026-27ನೇ ಸಾಲಿನ ವಿವಿಧ ಯೋಜನೆಗಳಡಿ ನೀಡಲಾಗುವ ಧನಸಹಾಯ ಹಾಗೂ ಸಹಾಯಧನಕ್ಕಾಗಿ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಸೆಪ್ಟೆಂಬರ್ 04 ರವರೆಗೆ ವಿಸ್ತರಿಸಲಾಗಿದೆ ಎಂದು ಕನ್ನಡ ಮತ್ತು
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಧನಸಹಾಯ: ಅರ್ಜಿ ಸಲ್ಲಿಕೆ ಅವಧಿ ಸೆಪ್ಟೆಂಬರ್ 4 ರವರೆಗೆ ವಿಸ್ತರಣೆ


ಬಳ್ಳಾರಿ, 23 ಆಗಸ್ಟ್ (ಹಿ.ಸ.)

ಆ್ಯಂಕರ್ : ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ 2026-27ನೇ ಸಾಲಿನ ವಿವಿಧ ಯೋಜನೆಗಳಡಿ ನೀಡಲಾಗುವ ಧನಸಹಾಯ ಹಾಗೂ ಸಹಾಯಧನಕ್ಕಾಗಿ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಸೆಪ್ಟೆಂಬರ್ 04 ರವರೆಗೆ ವಿಸ್ತರಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಅವರು ತಿಳಿಸಿದ್ದಾರೆ.

ನಾಡಿನ ಭಾಷಾ ಸಂವರ್ಧನೆ, ಕಲೆ, ಸಾಹಿತ್ಯ, ಸಂಗೀತ, ಜಾನಪದ, ನೃತ್ಯ ಮುಂತಾದ ಸಾಂಸ್ಕೃತಿಕ ಕಲಾ ಪ್ರಕಾರಗಳನ್ನು ಉಳಿಸಿ-ಬೆಳೆಸಲು ಶ್ರಮಿಸುತ್ತಿರುವ ನೋಂದಾಯಿತ ಸಂಘ-ಸಂಸ್ಥೆಗಳಿಗೆ ಧನಸಹಾಯ, ಕಲಾವಿದರಿಗೆ ವಾದ್ಯ ಪರಿಕರ ಮತ್ತು ವೇಷಭೂಷಣ ಖರೀದಿಗೆ ಸಹಾಯಧನ ಹಾಗೂ ಚಿತ್ರಕಲೆ ಮತ್ತು ಶಿಲ್ಪ ಕಲಾಕೃತಿಗಳ ಪ್ರದರ್ಶನಕ್ಕೆ ಸಹಾಯಧನ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಯೋಜನೆಗಳು ಸಾಮಾನ್ಯ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉಪಯೋಜನೆಯಡಿ ಅನ್ವಯವಾಗುತ್ತವೆ.

ಈ ಹಿಂದೆ ಅರ್ಜಿ ಸಲ್ಲಿಸಲು ಆಗಸ್ಟ್ 20 ಕೊನೆಯ ದಿನವಾಗಿತ್ತು. ಇದೀಗ ಅರ್ಹ ಕಲಾವಿದರು ಹಾಗೂ ಸಂಘ-ಸಂಸ್ಥೆಗಳ ಅನುಕೂಲಕ್ಕಾಗಿ ಸೆಪ್ಟೆಂಬರ್ 04 ರವರೆಗೆ ಕಾಲಾವಕಾಶವನ್ನು ವಿಸ್ತರಿಸಲಾಗಿದೆ.

ಆಸಕ್ತರು ಹಾಗೂ ಅರ್ಹರು ಸರ್ಕಾರದ ಸೇವಾಸಿಂಧು ಪೋರ್ಟಲ್ ((sevasindhu.karnataka.gov.in) ಮೂಲಕವೇ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬೇಕು. ಕಚೇರಿಯಲ್ಲಿ ನೇರವಾಗಿ ಸಲ್ಲಿಸುವ ಭೌತಿಕ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ ಹಾಗೂ ನಿಗದಿತ ದಿನಾಂಕದ ನಂತರ ಬರುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ನಗರದ ರಾಜ್ಕುಮಾರ್ ರಸ್ತೆಯಲ್ಲಿರುವ ಸಾಂಸ್ಕೃತಿಕ ಸಮುಚ್ಚಯದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಅಥವಾ ದೂ.08392-275182, 080-24410547, 080-22213530, 080-22241325, ಮೊ.8792662814, 8792662816, 9986837037, 9900337738, 9448436877, 9480197511, 9916600027 ಗೆ ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande