ಶಿರಾಳಕೊಪ್ಪದಲ್ಲಿ ಭಾರತ್ ಜೋಡೋ ಯುವ ಸಂಘ ಸದಸ್ಯತ್ವಕ್ಕೆ ಅರ್ಜಿ ಆಹ್ವಾನ
ಶಿವಮೊಗ್ಗ, 23 ಆಗಸ್ಟ್ (ಹಿ.ಸ.): ಆ್ಯಂಕರ್:ಶಿರಾಳಕೊಪ್ಪ ಪುರಸಭೆ ವ್ಯಾಪ್ತಿಯ ಯುವಜನರನ್ನು ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಉದ್ದೇಶದಿಂದ ‘ಭಾರತ್ ಜೋಡೋ ಯುವ ಸಂಘ’ ಸದಸ್ಯತ್ವಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರ
ಶಿರಾಳಕೊಪ್ಪದಲ್ಲಿ ಭಾರತ್ ಜೋಡೋ ಯುವ ಸಂಘ ಸದಸ್ಯತ್ವಕ್ಕೆ ಅರ್ಜಿ ಆಹ್ವಾನ


ಶಿವಮೊಗ್ಗ, 23 ಆಗಸ್ಟ್ (ಹಿ.ಸ.):

ಆ್ಯಂಕರ್:ಶಿರಾಳಕೊಪ್ಪ ಪುರಸಭೆ ವ್ಯಾಪ್ತಿಯ ಯುವಜನರನ್ನು ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಉದ್ದೇಶದಿಂದ ‘ಭಾರತ್ ಜೋಡೋ ಯುವ ಸಂಘ’ ಸದಸ್ಯತ್ವಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಶಿರಾಳಕೊಪ್ಪ ಪುರಸಭೆಯ ಸಹಯೋಗದಲ್ಲಿ ಪುರಸಭೆ ವ್ಯಾಪ್ತಿಯ ಎಲ್ಲ ವಾರ್ಡ್‌ಗಳಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಯುವ ಸಂಘಗಳನ್ನು ಸ್ಥಾಪಿಸಲಾಗಿದೆ.

16ರಿಂದ 35 ವರ್ಷದೊಳಗಿನ ಯುವಕ-ಯುವತಿಯರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಆಯ್ಕೆಯಾದ ಸದಸ್ಯರು ಕ್ರೀಡೆ, ದೈಹಿಕ ಕ್ಷಮತೆ, ಯುವ ಸಬಲೀಕರಣ, ಕೌಶಲ್ಯಾಭಿವೃದ್ಧಿ, ಸಮುದಾಯ ಅಭಿವೃದ್ಧಿ, ಅರಣ್ಯ ಮತ್ತು ಪರಿಸರ ಸಂರಕ್ಷಣೆ, ಆರೋಗ್ಯ, ಯೋಗಕ್ಷೇಮ ಹಾಗೂ ಸಾಂಸ್ಕೃತಿಕ ಮತ್ತು ಸಾಮಾಜಿಕ ಸಾಮರಸ್ಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಬೇಕಾಗುತ್ತದೆ.

ಆಸಕ್ತರು bjys.karnataka.gov.in ಮೂಲಕ ಆನ್‌ಲೈನ್‌ನಲ್ಲಿ ನೋಂದಣಿ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಶಿರಾಳಕೊಪ್ಪ ಪುರಸಭೆ ಕಚೇರಿಯನ್ನು ಸಂಪರ್ಕಿಸುವಂತೆ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande