ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
ಧಾರವಾಡ, 23 ಆಗಸ್ಟ್ (ಹಿ.ಸ.): ಆ್ಯಂಕರ್: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ 2026-27ನೇ ಸಾಲಿನಲ್ಲಿ ಅನುಷ್ಠಾನಗೊಳ್ಳುತ್ತಿರುವ ವಿವಿಧ ಯೋಜನೆಗಳಡಿ ಸಾಲ ಹಾಗೂ ಸಹಾಯಧನ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಅರಿವು (ನವೀಕರಣ) ವಿದ್ಯಾಭ್ಯಾಸ ಸಾಲ, ಸ್ವಾವಲ
ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ


ಧಾರವಾಡ, 23 ಆಗಸ್ಟ್ (ಹಿ.ಸ.):

ಆ್ಯಂಕರ್:

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ 2026-27ನೇ ಸಾಲಿನಲ್ಲಿ ಅನುಷ್ಠಾನಗೊಳ್ಳುತ್ತಿರುವ ವಿವಿಧ ಯೋಜನೆಗಳಡಿ ಸಾಲ ಹಾಗೂ ಸಹಾಯಧನ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ.

ಅರಿವು (ನವೀಕರಣ) ವಿದ್ಯಾಭ್ಯಾಸ ಸಾಲ, ಸ್ವಾವಲಂಬಿ ಸಾರಥಿ, ಶ್ರಮಶಕ್ತಿ, ವೃತ್ತಿ ಪ್ರೋತ್ಸಾಹ, ರೇಷ್ಮೆ ನೂಲು ಬಿಚ್ಚಾಣಿಕೆ ಹಾಗೂ ಗಂಗಾ ಕಲ್ಯಾಣ ಯೋಜನೆಗಳಡಿ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಹ ಅಭ್ಯರ್ಥಿಗಳು ಸೆಪ್ಟೆಂಬರ್ 18, 2026ರೊಳಗಾಗಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಆನ್‌ಲೈನ್ ಜಾಲತಾಣದ ಮೂಲಕ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಧಾರವಾಡ ಜಿಲ್ಲಾ ವ್ಯವಸ್ಥಾಪಕರ ಕಚೇರಿಯ 0836-2748226 ದೂರವಾಣಿ ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande