ವಿಶೇಷ ಘಟಕ ಯೋಜನೆ, ಗಿರಿಜನ ಉಪ ಯೋಜನೆಯಡಿ ಉದ್ದಿಮೆದಾರರಿಗೆ ನೆರವು
ಶಿವಮೊಗ್ಗ, 23 ಆಗಸ್ಟ್ (ಹಿ.ಸ.): ಆ್ಯಂಕರ್: ರಾಜ್ಯ ಸರ್ಕಾರದ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪ ಯೋಜನೆಯಡಿ ಅರ್ಹ ಉದ್ದಿಮೆದಾರರಿಗೆ ವಿವಿಧ ಸೌಲಭ್ಯ ಒದಗಿಸಲು ಅರ್ಜಿ ಆಹ್ವಾನಿಸಲಾಗಿದೆ. ಸಾಫ್ಟ್ ಸೀಡ್ ಕ್ಯಾಪಿಟಲ್, ಶೇ.60ರಷ್ಟು ಸಹಾಯಧನ, ಸಾಲ ಶುಲ್ಕ ಮರುಪಾವತಿ ಹಾಗೂ ವಿದ್ಯುಚ್ಛಕ್ತಿ ಸಹಾಯಧನ ಯೋಜ
ವಿಶೇಷ ಘಟಕ ಯೋಜನೆ, ಗಿರಿಜನ ಉಪ ಯೋಜನೆಯಡಿ ಉದ್ದಿಮೆದಾರರಿಗೆ ನೆರವು


ಶಿವಮೊಗ್ಗ, 23 ಆಗಸ್ಟ್ (ಹಿ.ಸ.):

ಆ್ಯಂಕರ್:

ರಾಜ್ಯ ಸರ್ಕಾರದ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪ ಯೋಜನೆಯಡಿ ಅರ್ಹ ಉದ್ದಿಮೆದಾರರಿಗೆ ವಿವಿಧ ಸೌಲಭ್ಯ ಒದಗಿಸಲು ಅರ್ಜಿ ಆಹ್ವಾನಿಸಲಾಗಿದೆ.

ಸಾಫ್ಟ್ ಸೀಡ್ ಕ್ಯಾಪಿಟಲ್, ಶೇ.60ರಷ್ಟು ಸಹಾಯಧನ, ಸಾಲ ಶುಲ್ಕ ಮರುಪಾವತಿ ಹಾಗೂ ವಿದ್ಯುಚ್ಛಕ್ತಿ ಸಹಾಯಧನ ಯೋಜನೆಗಳಡಿ ಅರ್ಹ ಉದ್ದಿಮೆದಾರರಿಗೆ ನೆರವು ನೀಡಲಾಗುವುದು.

ಈಗಾಗಲೇ ಬ್ಯಾಂಕ್ ಸಾಲ ಪಡೆದು ಘಟಕ ಸ್ಥಾಪಿಸಿರುವ ಅರ್ಹ ಉದ್ದಿಮೆದಾರರು ಹಾಗೂ ಬ್ಯಾಂಕ್ ಸಾಲ ಪಡೆದು ಹೊಸ ಉದ್ದಿಮೆ ಸ್ಥಾಪಿಸಲು ಇಚ್ಛಿಸುವವರು ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗದ ನೆಹರೂ ರಸ್ತೆಯಲ್ಲಿರುವ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande