ಹುಬ್ಬಳ್ಳಿ ಆಸಾರ ಹೊಂಡ ವಿಚಾರದಲ್ಲಿ ಬಿಜೆಪಿಯಿಂದ ಅಶಾಂತಿ ಸೃಷ್ಟಿ: ಅಷ್ಪಕ್ ಕುಮಟಾಕರ್
ಹುಬ್ಬಳ್ಳಿ, 23 ಆಗಸ್ಟ್ (ಹಿ.ಸ.): ಆ್ಯಂಕರ್: ಹುಬ್ಬಳ್ಳಿ‌ ಆಸಾರ ಹೊಂಡದ ವಿಚಾರವನ್ನು ಮುಂದಿಟ್ಟುಕೊಂಡು ಬಿಜೆಪಿ ನಾಯಕರು ಸಮಾಜದಲ್ಲಿ ಅನಗತ್ಯವಾಗಿ ಅಶಾಂತಿ ಹಾಗೂ ಭಯದ ವಾತಾವರಣ ಸೃಷ್ಟಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಅಷ್ಪಕ್ ಕುಮಟಾಕರ್ ಆರೋಪಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡ
ಅಷ್ಪಕ್ ಕುಮಟಾಕರ್


ಹುಬ್ಬಳ್ಳಿ, 23 ಆಗಸ್ಟ್ (ಹಿ.ಸ.):

ಆ್ಯಂಕರ್:

ಹುಬ್ಬಳ್ಳಿ‌ ಆಸಾರ ಹೊಂಡದ ವಿಚಾರವನ್ನು ಮುಂದಿಟ್ಟುಕೊಂಡು ಬಿಜೆಪಿ ನಾಯಕರು ಸಮಾಜದಲ್ಲಿ ಅನಗತ್ಯವಾಗಿ ಅಶಾಂತಿ ಹಾಗೂ ಭಯದ ವಾತಾವರಣ ಸೃಷ್ಟಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಅಷ್ಪಕ್ ಕುಮಟಾಕರ್ ಆರೋಪಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಆಸಾರ ಹೊಂಡದಲ್ಲಿ ವಿವಿಧ ಜಾತಿ, ಧರ್ಮದ ಜನರು ಪರಸ್ಪರ ಪ್ರೀತಿ, ವಿಶ್ವಾಸದಿಂದ ಜೀವನ ನಡೆಸುತ್ತಿದ್ದಾರೆ. ಆದರೆ ಹೊರಗಿನವರು ಹಾಗೂ ಶಾಸಕರಾದ ಅರವಿಂದ ಬೆಲ್ಲದ, ಮಹೇಶ ತೆಂಗಿನಕಾಯಿ ಮತ್ತು ಪ್ರಮೋದ್ ಮುತಾಲಿಕ್ ಅವರು ಅಲ್ಲಿಗೆ ತೆರಳಿ ಜನರಲ್ಲಿ ಭಯದ ವಾತಾವರಣ ನಿರ್ಮಿಸಿದ್ದಾರೆ ಎಂದು ಅವರು ದೂರಿದ್ದಾರೆ.

ಜನರಿಗೆ ಕುಡಿಯುವ ನೀರು, ಉತ್ತಮ ರಸ್ತೆ, ಬಡವರಿಗೆ ವಸತಿ, ಯುವಕರಿಗೆ ಉದ್ಯೋಗ ಹಾಗೂ ಮಹಿಳಾ ಸಬಲೀಕರಣದಂತಹ ಮೂಲಭೂತ ಸೌಲಭ್ಯಗಳನ್ನು ಒದಗಿಸುವುದು ಜನಪ್ರತಿನಿಧಿಗಳ ಆದ್ಯತೆಯಾಗಬೇಕು. ಆದರೆ ಬಿಜೆಪಿ ನಾಯಕರು ಸಾರ್ವಜನಿಕ ಸಮಸ್ಯೆಗಳನ್ನು ಬದಿಗೊತ್ತಿ ಧರ್ಮದ ಹೆಸರಿನಲ್ಲಿ ರಾಜಕಾರಣ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ದೇಶದ ಯುವಜನತೆ ಉತ್ತಮ ಸಮಾಜ ಹಾಗೂ ಬಲಿಷ್ಠ ಭಾರತ ನಿರ್ಮಾಣದ ಕನಸು ಕಾಣುತ್ತಿದ್ದಾರೆ. ಸಮಾಜದಲ್ಲಿ ಧರ್ಮದ ಹೆಸರಿನಲ್ಲಿ ವಿಭಜನೆ ಸೃಷ್ಟಿಸುವ ರಾಜಕಾರಣವನ್ನು ಯುವಜನತೆ ಒಪ್ಪುವುದಿಲ್ಲ. ಇಂತಹ ಬೆಳವಣಿಗೆಗಳು ಬಡವರ ಅಭಿವೃದ್ಧಿಗೆ ಹಿನ್ನಡೆಯಾಗುತ್ತವೆ ಎಂದು ಹೇಳಿದರು.

ಸಮಾಜದಲ್ಲಿ ಅಶಾಂತಿ ಸೃಷ್ಟಿಸದೆ, ಹಿಂದೂ-ಮುಸ್ಲಿಂ ಎಂಬ ವಿಭಜನೆಯ ರಾಜಕಾರಣವನ್ನು ಕೈಬಿಟ್ಟು, ಎಲ್ಲರೂ ಒಂದೇ ದೇಶದ ಪ್ರಜೆಗಳಾಗಿ ಪರಸ್ಪರ ಸೌಹಾರ್ದತೆ ಹಾಗೂ ಸಹೋದರತ್ವದಿಂದ ಬದುಕುವ ವಾತಾವರಣ ನಿರ್ಮಿಸಬೇಕು ಎಂದು ಬಿಜೆಪಿ ನಾಯಕರಿಗೆ ಅಷ್ಪಕ್ ಕುಮಟಾಕರ್ ಸಲಹೆ ನೀಡಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande