
ಧಾರವಾಡ, 23 ಆಗಸ್ಟ್ (ಹಿ.ಸ.):
ಆ್ಯಂಕರ್:ಸ್ವರಸಾಮ್ರಾಟ ಪದ್ಮಭೂಷಣ ಪಂ. ಬಸವರಾಜ ರಾಜಗುರು ಅವರ 106ನೇ ಜನ್ಮದಿನಾಚರಣೆ ಅಂಗವಾಗಿ ಆ.24ರಂದು ಧಾರವಾಡದಲ್ಲಿ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ರಾಷ್ಟ್ರೀಯ ಸಂಗೀತೋತ್ಸವ ಆಯೋಜಿಸಲಾಗಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧೀನದ ಸ್ವರಸಾಮ್ರಾಟ ಪಂ. ಬಸವರಾಜ ರಾಜಗುರು ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ವತಿಯಿಂದ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ ಸಾಂಸ್ಕೃತಿಕ ಭವನದಲ್ಲಿ ಸಂಜೆ 5.30ಕ್ಕೆ ಕಾರ್ಯಕ್ರಮ ನಡೆಯಲಿದೆ.
2025-26ನೇ ಸಾಲಿನ ಪಂ. ಬಸವರಾಜ ರಾಜಗುರು ರಾಷ್ಟ್ರೀಯ ಪ್ರಶಸ್ತಿಯನ್ನು ಬೆಂಗಳೂರಿನ ಖ್ಯಾತ ಸಂಗೀತ ಕಲಾವಿದ ಪಂ. ಪರಮೇಶ್ವರ ಹೆಗಡೆ ಅವರಿಗೆ ಪ್ರದಾನ ಮಾಡಲಾಗುವುದು. ಪ್ರಶಸ್ತಿಯು ₹1 ಲಕ್ಷ ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ.
ಯುವ ಪ್ರಶಸ್ತಿಗೆ ಬೆಂಗಳೂರಿನ ಸಂಗೀತ ಕಲಾವಿದ ಅನಿರುದ್ಧ ಐತಾಳ ಹಾಗೂ ಮೈಸೂರಿನ ಸರೋದ್ ವಾದಕ ಸಚಿನ್ ಹಂಪೆ ಆಯ್ಕೆಯಾಗಿದ್ದು, ತಲಾ ₹25 ಸಾವಿರ ನಗದು ಹಾಗೂ ಪ್ರಶಸ್ತಿ ಫಲಕ ನೀಡಿ ಗೌರವಿಸಲಾಗುವುದು.
ಪಂ. ಎಂ. ವೆಂಕಟೇಶಕುಮಾರ ಕಾರ್ಯಕ್ರಮ ಉದ್ಘಾಟಿಸಲಿದ್ದು, ಧಾರವಾಡ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಪಂ. ಕೈವಲ್ಯಕುಮಾರ ಗುರವ ಅಧ್ಯಕ್ಷತೆ ವಹಿಸಲಿದ್ದಾರೆ. ಕೆ.ಎಚ್. ಚನ್ನೂರ ಹಾಗೂ ಭಾರತಿದೇವಿ ರಾಜಗುರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಪ್ರಶಸ್ತಿ ಪ್ರದಾನದ ಬಳಿಕ ಪಂ. ಪರಮೇಶ್ವರ ಹೆಗಡೆ ಮತ್ತು ಅನಿರುದ್ಧ ಐತಾಳ ಅವರಿಂದ ಹಿಂದೂಸ್ತಾನಿ ಶಾಸ್ತ್ರೀಯ ಗಾಯನ ಹಾಗೂ ಸಚಿನ್ ಹಂಪೆ ಅವರಿಂದ ಸರೋದ್ ವಾದನ ನಡೆಯಲಿದೆ. ಸಂಗೀತಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಟ್ರಸ್ಟ್ ಮನವಿ ಮಾಡಿದೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.