
ಬೆಂಗಳೂರು, 23 ಆಗಸ್ಟ್ (ಹಿ.ಸ.):
ಆ್ಯಂಕರ್:ಬೆಂಗಳೂರಿನ ಕಬ್ಬನ್ ಪಾರ್ಕ್‌ನಲ್ಲಿರುವ ಲಾರ್ಡ್ ಮಾರ್ಕ್ ಕಬ್ಬನ್ ಪ್ರತಿಮೆ ಬಳಿ ಕಬ್ಬನ್ ಪಾರ್ಕ್ ವಾಕರ್ಸ್ ಅಸೋಸಿಯೇಷನ್ ವತಿಯಿಂದ ಲಾರ್ಡ್ ಮಾರ್ಕ್ ಕಬ್ಬನ್ ಅವರ 251ನೇ ಜನ್ಮದಿನವನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಅಸೋಸಿಯೇಷನ್‌ನ ಪದಾಧಿಕಾರಿಗಳು ಹಾಗೂ ಸದಸ್ಯರು ಮಾರ್ಕ್ ಕಬ್ಬನ್ ಅವರ ಪ್ರತಿಮೆಗೆ ಗೌರವ ಸಲ್ಲಿಸಿ, ಅವರ ಕಾಲಘಟ್ಟದಲ್ಲಿ ಬೆಂಗಳೂರಿನ ಆಡಳಿತ ಮತ್ತು ನಗರಾಭಿವೃದ್ಧಿಗೆ ನೀಡಿದ ಕೊಡುಗೆಗಳನ್ನು ಸ್ಮರಿಸಿದರು.
ಕಬ್ಬನ್ ಪಾರ್ಕ್ ನಗರದ ಪ್ರಮುಖ ಹಸಿರು ತಾಣವಾಗಿದ್ದು, ಇದರ ಸಂರಕ್ಷಣೆ ಹಾಗೂ ಪರಿಸರದ ರಕ್ಷಣೆಯ ಅಗತ್ಯದ ಕುರಿತು ಕಾರ್ಯಕ್ರಮದಲ್ಲಿ ಒತ್ತಿ ಹೇಳಲಾಯಿತು. ವಾಯುಮಾಲಿನ್ಯ ನಿಯಂತ್ರಣ, ಹಸಿರು ಪ್ರದೇಶಗಳ ರಕ್ಷಣೆ ಮತ್ತು ಸಾರ್ವಜನಿಕರಿಗೆ ಆರೋಗ್ಯಕರ ವಾತಾವರಣ ಕಲ್ಪಿಸುವ ನಿಟ್ಟಿನಲ್ಲಿ ಕಬ್ಬನ್ ಪಾರ್ಕ್‌ನ ಸಂರಕ್ಷಣೆ ಅತ್ಯಂತ ಮಹತ್ವದ್ದಾಗಿದೆ ಎಂದು ಸಂಘದ ಸದಸ್ಯರು ಅಭಿಪ್ರಾಯಪಟ್ಟರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.