
ತುಮಕೂರು, 23 ಆಗಸ್ಟ್ (ಹಿ.ಸ.):
ಆ್ಯಂಕರ್:
ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ ಅವರು ತುಮಕೂರು ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ, ₹132 ಕೋಟಿ ಅಂದಾಜು ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ 300 ಹಾಸಿಗೆಗಳ ಸಾಮರ್ಥ್ಯದ ನೂತನ ಆಸ್ಪತ್ರೆ ಕಟ್ಟಡದ ಕಾಮಗಾರಿಯನ್ನು ಪರಿಶೀಲಿಸಿದರು.
ಈ ವೇಳೆ ಹಳೆಯ ಕಟ್ಟಡ ತೆರವು ಕಾರ್ಯದ ಪ್ರಗತಿಯನ್ನೂ ವೀಕ್ಷಿಸಿದ ಅವರು, ಕಾಮಗಾರಿಯ ಜವಾಬ್ದಾರಿ ವಹಿಸಿಕೊಂಡಿರುವ ಕೆಎಂವಿ ಪ್ರಾಜೆಕ್ಟ್ಸ್ ಸಿಬ್ಬಂದಿಗೆ ನಿರ್ಮಾಣ ಕಾರ್ಯವನ್ನು ಮತ್ತಷ್ಟು ಚುರುಕುಗೊಳಿಸುವಂತೆ ಸೂಚಿಸಿದರು.
ನೂತನ ಕಟ್ಟಡ ನಿರ್ಮಾಣದಿಂದ ಜಿಲ್ಲಾಸ್ಪತ್ರೆಯ ವೈದ್ಯಕೀಯ ಸೇವೆಗಳ ಸಾಮರ್ಥ್ಯ ಹೆಚ್ಚಲಿದ್ದು, ಜಿಲ್ಲೆಯ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸಲು ಅನುಕೂಲವಾಗಲಿದೆ ಎಂದು ತಿಳಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.